Breaking News

ಯಲ್ಲಾಪುರ ಸಿಂಗಂ ಖ್ಯಾತಿಯ ಸಿಪಿಐ ವಿಜಯ್ ಬಿರಾದಾರ್ ಅವರಿಗೆ ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಯಾಗಿ ಬಡ್ತಿ ಅಧಿಕಾರ ಸ್ವೀಕಾರ.


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪೊಲೀಸ್ ಠಾಣೆಯಲ್ಲಿ  ಕೆಲ ವರ್ಷಗಳ ಹಿಂದೆ ಸಿಂಹ ಘರ್ಜಿಸುತ್ತಿತ್ತು ಅದುವೆ ಸಿಪಿಐ ವಿಜಯ್ ಬಿರಾದಾರ ಎಂಬುದು ಯಲ್ಲಾಪುರ ತಾಲೂಕಿನ ಪ್ರತಿಯೊಬ್ಬರಿಗೂ ತಿಳಿದಂತಹ ವಿಷಯ ಅಂತಹ ಖಡಕ್ ಪೊಲೀಸ್ ಆಫಿಸರ್ ಅವರನ್ನು ಸರ್ಕಾರ ಕೊಪ್ಪಳ ಜಿಲ್ಲಾ ಲೋಕಾಯುಕ್ತ ಡಿ.ವೈ.ಎಸ್ ಪಿ ಯಾಗಿ ಬಡ್ತಿ ನೀಡಿದ್ದು ಅಧಿಕಾರ ಸ್ವೀಕರಿಸಿದ್ದಾರೆ.


ವಿಜಯ್ ಬಿರಾದಾರ್ ಅವರು ಸಿಪಿಐ ಆಗಿ ಯಲ್ಲಾಪುರ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದು ಕೆಲವೇ ವರ್ಷಗಳಾದರು ಜನಮಾನಸದಲ್ಲಿ ಸಿಂಗಂ ಖ್ಯಾತಿಯಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಯಲ್ಲಾಪುರ ಠಾಣೆಯಿಂದ ವರ್ಗಾವಣೆ ಆದವರು ಕಲಘಟಗಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಅಲ್ಲಿಂದ ಗದಗ ವರ್ಗಾವಣೆಗೊಂಡು ಅಲ್ಲಿಯು ಉತ್ತಮ ಸೇವೆ ಸಲ್ಲಿಸಿ ಹೆಸರಾದರು ಸದ್ಯ ರಾಜ್ಯ ಸರ್ಕಾರ ಕೊಪ್ಪಳ ಜಿಲ್ಲೆ ಲೋಕಾಯುಕ್ತ ಡಿವೈಎಸ್ಪಿ ಯಾಗಿ ಬಡ್ತಿ ಹೊಂದಿದ್ದು ಅಧಿಕಾರ ಸ್ವೀಕರಿಸಿದ್ದಾರೆ.

ವಿಶೇಷ ಎಂದರೆ ವಿಜಯ್ ಬಿರಾದಾರ ಅವರು ಯಲ್ಲಾಪುರ ದಿಂದ ವರ್ಗವಾಗಿ ತೆರಳಿದ ನಂತರವು ಅವರ ಪ್ರತಿ ನಡೆಯನ್ನು ತಿಳಿದುಕೊಳ್ಳುವ ಕುತೂಹಲ ಯಲ್ಲಾಪುರ ತಾಲೂಕಿನ ಜನತೆ ಉಳಿಸಿಕೊಂಡಿರುವುದು ಅತ್ಯಂತ ವಿಶೇಷ ಸಂಗತಿಯಾಗಿದೆ.


ಸದ್ಯ ಕೊಪ್ಪಳ ಜಿಲ್ಲಾ ಲೋಕಾಯುಕ್ತ ಡಿ.ವೈ.ಎಸ್.ಪಿ ಯಾಗಿ ಬಡ್ತಿ ಹೊಂದಿ ಅಧಿಕಾರ ಸ್ವೀಕರಿಸಿದ್ದಾರೆ. ಅವರ ಭವಿಷ್ಯದ ದಿನಗಳು ಉಜ್ವಲವಾಗಿರಲಿ ಮತ್ತು ಯಶಸ್ವಿಯಾಗಿ ತಮ್ಮ ವೃತ್ತಿ ನಿಭಾಯಿಸಲಿ ಎಂಬುದು ಯಲ್ಲಾಪುರ ತಾಲೂಕಿನ ಸಹಸ್ರಾರು ಅಭಿಮಾನಿಗಳ ಹಾರೈಕೆಯಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *