
ಪ್ರತಿಧ್ವನಿ ಯಲ್ಲಾಪುರ : ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸಮಾಜದಲ್ಲಿ ಜಾಗೃತಿ ಮೂಡಿಸುವ ಹಾಗೂ ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ಪತ್ರಕರ್ತರು ಸಮರ್ಥವಾಗಿ ನಿರ್ವಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಮಂಗಳವಾರ ಸವಣಗೇರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ವೇದಿಕೆ ಕಾರ್ಯಕ್ರಮಕ್ಕು ಮೊದಲು ಸವಣಗೇರಿ ಶಾಲೆ ಆವರಣದಲ್ಲಿ ವನಮಹೋತ್ಸವ ನಿಮಿತ್ತ ಶಾಸಕ ಹೆಬ್ಬಾರ್ ಸಸು ನೆಟ್ಟು ನೀರೆರೆದರು.

ವೇದಿಕೆಯಲ್ಲಿ ಹಿರಿಯ ಪತ್ರಕರ್ತರಾದ ಕೆ.ಎಸ್.ಭಟ್,ನರಸಿಂಹ ಸಾತೊಡ್ಡಿ,ನಾಗೇಂದ್ರ ಯಲ್ಲಾಪುರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಕಲ್ಪ ಸಂಸ್ಥೆ ಪ್ರಮುಖ ಪ್ರಮೋದ್ ಹೆಗಡೆ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್ ಹೊಸ್ಕೆರಿ ,ಪತ್ರಕರ್ತ ಸಂಘದ ಅಧ್ಯಕ್ಷ ಸುಬ್ರಾಯ ಬಿದ್ರೇಮನೆ, ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ನರಸಿಂಹ ಅಡಿ, ಲಯನ್ಸ್ ಅಧ್ಯಕ್ಷ ಶೇಷಗಿರಿ ಪ್ರಭು, ಶಮಾ ಗ್ಯಾಸ್ ಮಾಲಿಕ ಶೇಖ್,ಎಸ್ ಡಿ.ಎಂ.ಸಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ , ಉಪಾಧ್ಯಕ್ಷೆ ಶಿಲ್ಪಾರವಿ ನಾಯ್ಕ್, ಸದಸ್ಯ ರವಿ ನಾಯ್ಕ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಶ್ರೀಧರ್ ಅಣಲಗಾರ ಪ್ರಮುಖರಾದ ವಿಜಯ್ ಕುಮಾರ್ ನಾಯ್ಕ್, ಜಯರಾಜ್ ಗೋವಿ,ಪ್ರಭಾವತಿ ಜಯರಾಜ್ ದತ್ತಾತ್ರೇಯ ಕಣ್ಣೀಪಾಲ್, ಪದಾಧಿಕಾರಿಗಳು, ಪತ್ರಕರ್ತರು, ವಿವಿಧ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.









Prathidvani Yellapura