Breaking News

ಹುಣಸಗೇರಿಯಿಂದ-ಯಲ್ಲಾಪುರಕ್ಕೆ ಸಾರಿಗೆ ಸೌಲಭ್ಯ- ಶಾಸಕ ಹೆಬ್ಬಾರ್, ಪ್ರಮುಖ ವಿಜಯ್ ಮಿರಾಶಿಗೆ ಕೃತಜ್ಞತೆ ಸಲ್ಲಿಕೆ.

ಪ್ರತಿಧ್ವನಿ ಯಲ್ಲಾಪುರ : ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಮುಖಂಡರಾದ  ವಿಜಯ ಮಿರಾಶಿ ಅವರ ನೇತೃತ್ವದಲ್ಲಿ ಹುಣಸಗೇರಿಯಿಂದ -ಯಲ್ಲಾಪುರಕ್ಕೆ ಸಾರಿಗೆ ಸೌಲಭ್ಯ ಪ್ರಾರಂಭಿಸಿದ್ದು ಗ್ರಾಮಸ್ಥರಲ್ಲಿ ಸಂತಸ ಮನೆಮಾಡಿದೆ.


ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಹುಣಸಗೇರಿ ಗೌಳಿವಾಡಾ ಗ್ರಾಮದಲ್ಲಿ ದಟ್ಟವಾದ ಅರಣ್ಯ ಪ್ರದೇಶ ಹೊಂದಿದ್ದು ಅನೇಕ ಪ್ರಾಣಿಗಳ ಭಯದಿಂದ ಕೂಡಿದೆ. ಇಂತಹ ದುರ್ಗಮ ಅರಣ್ಯದ‌ನಡುವೆ ನಡೆದು ದಾಗುವುದು  ದುಸ್ತರದ ಸಂಗತಿಯಾಗಿತ್ತು. ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆಯಾಗುತ್ತಿತ್ತು. ಈ ಕುರಿತು ಸಮಸ್ಯೆಯನ್ನು ಈ ಭಾಗದ ಪ್ರಮುಖ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಮಸ್ಯೆ ಶಾಸಕರ ಗಮನಕ್ಕೆ ತಂದು ಬಸ್ ಸೌಕರ್ಯ ಕಾಣದ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ರಾಘವೇಂದ್ರ ಗೊಂದಿ, ರೆಹಮತ್ ಅಬ್ಬಿಗೆರೆ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್, ಸ್ಥಳೀಯ ಪ್ರಮುಖರು, ಊರ ನಾಗರಿಕರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಶ್ರೀ ರಾಮಸೇನಾ ಯುವಕರ ಸಂಘ (ರಿ )ಹುಣಸಗೇರಿ ಗೌಳಿವಾಡ ಹಾಗೂ ಸಮಸ್ತ ಊರ ನಾಗರೀಕರು ಸರ್ವರಿಗು ಕೃತಜ್ಞತೆ ಸಲ್ಲಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *