Breaking News

ದಾವಣಗೆರೆಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಪ್ರಶಸ್ತಿಗಳಿಗೆ ಭಾಜನರಾದ ವಜ್ರಳ್ಳಿ ಶಾಲೆ ವಿದ್ಯಾರ್ಥಿಗಳು.

ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ವಜ್ರಳ್ಳಿ ಸರ್ವೋದಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ದಾವಣಗೆರೆಯ ” ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ” ನೀಡುವ ಶಿಕ್ಷಣ ಕ್ಷೇತ್ರದ ಪ್ರಶಸ್ತಿಗಳಿಗೆ ಭಾಜನರಾಗಿದ್ದು ಯಲ್ಲಾಪುರ ತಾಲೂಕಿಗೆ ಓದಿದ ಶಾಲೆಗೆ ಕಲಿಸಿದ ಗುರುಗಳಿಗೆ ಹೆತ್ತ ತಂದೆತಾಯಿಗಳಿಗೆ ಗೌರವ ತಂದಿದ್ದಾರೆ.


ಕಳೆದ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರಯುಕ್ತ ಸರ್ವೋದಯ ಪ್ರೌಢಶಾಲೆ ವಜ್ರಳ್ಳಿಯ ವಿದ್ಯಾರ್ಥಿಗಳಾದ
ರಶ್ಮಿತಾ ಶಂಕರ್ ಗೌಡ ಕನ್ನಡ ಕೌಸ್ತುಭ ಪ್ರಶಸ್ತಿ.
ದಿಶಾ ಪ್ರಮೋದ್ ಹೆಬ್ಬಾರ್ ಕನ್ನಡ ಕುವರಿ ಪ್ರಶಸ್ತಿ.
ಗಗನ್ ಗಾಂವ್ಕರ್ ಕನ್ನಡ ಕುವರ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಕನ್ನಡ ಶಿಕ್ಷಕಿ ಸೀಮಾ ಗೌಡ ಮಾರ್ಗದರ್ಶನದಲ್ಲಿ ಕಲಿತ ಮಕ್ಕಳು ಇವರಾಗಿದ್ದು,
ಸರ್ವೋದಯ ಶಿಕ್ಷಣ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಮುಖ್ಯಾಧ್ಯಾಪಕರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *