Breaking News

ಯಲ್ಲಾಪುರದಲ್ಲಿ‌ ನಡೆದ ” ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ “

ಪ್ರತಿಧ್ವನಿ ಯಲ್ಲಾಪುರ : ಮನುಷ್ಯರನ್ನು ಮಾರಾಟ ಮಾಡುವುದು,ಖರೀದಿಸುವುದು,ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅನಧಿಕೃತವಾಗಿ ಕದ್ದೊಯ್ಯುವುದು ಇವೆಲ್ಲವು ಸಹ ಮಹಾಪರಾಧವಾಗಿದೆ.ನಮ್ಮ ದೇಶದ ಕಾನೂನಿನಲ್ಲಿ ಮಾನವ ಕಳ್ಳಸಾಗಣಿಕೆ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಎಸ್ ಹೇಳಿದರು.


ಅವರು ಪಟ್ಟಣದ ವೈಟಿಎಸ್ಎಸ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಲ್ಲಾಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ” ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಿ ಜುಲೈ 30 ನ್ನು ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯಾಗಿ ಆಚರಿಸಲು ನಿರ್ಧರಿಸಲಾಯಿತು. ಇದರ ಗಂಭೀರತೆ ಅರಿತು ಭಾರತದಲ್ಲಿಯು ಜನರಲ್ಲಿ ಜಾಗೃತಿ ಮೂಡಿಸಲು ದಿನಾಚರಣೆ ಅನುಕೂಲವಾಯಿತು ಎಂದು   ಖ್ಯಾತ ವಕೀಲರಾದ ಪ್ರಕಾಶ್ ಜಿ ಭಟ್ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿಎಸ್ಐ ರಾಜಶೇಖರ ವಂದಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಸಿವಿಲ್ ನ್ಯಾಯಾಧೀಶರು ಹಾಗು ಸದಸ್ಯ ಕಾರ್ಯದರ್ಶಿ ಕಾನೂನು ಸೇವಾ ಸಮಿತಿ ಅನಿತಾ ಕುಮಾರಿ ಎಸ್ , ಸರ್ಕಾರಿ ವಕೀಲರಾದ ಎಸ್.ಟಿ.ಗಾಂವ್ಕರ್, ಸಹಾಯಕ ಅಭಿಯೋಜಕರಾದ ಚೇತನ್ ಟಿ ನಾಯ್ಕ್, ವಕೀಲರಾದ ಸಂದೇಶ್ ಹೆಗಡೆ, ಅರೆಕಾಲಿಕ ಸ್ವಯಂ ಸೇವಕರಾದ ಸಂಜೀವ್ ಕುಮಾರ್ ಹೊಸ್ಕೇರಿ, ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ನಿರ್ದೇಶಕ ನಾಗರಾಜ್ ಮದ್ಗುಣಿ ಮತ್ತು ಶಾಲೆಯ‌ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಇತರೆ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ,ಅರೆಕಾಲಿಕ ಸ್ವಯಂ ಸೇವಕ ಸುಧಾಕರ್ ನಾಯಕ ಕಾರ್ಯಕ್ರಮ ನಿರೂಪಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *