Breaking News

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ ಮಹತ್ವದ ಹೆಜ್ಜೆಯಾಗಿದೆ. ಇಂತಹ ಸಂಘಟನೆ ವೃತ್ತಿಪರರ ಹಕ್ಕುಗಳ ರಕ್ಷಣೆ, ಕೌಶಲ್ಯಾಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ನೆರವಾಗಲಿದೆ.

ನೂತನ ಅಧ್ಯಕ್ಷರಾಗಿ ಹಿರಿಯ ಛಾಯಾಗ್ರಾಹಕ ಗುರುಮೂರ್ತಿ ಗಾಂವ್ಕರ್ ಆಯ್ಕೆಯಾಗಿದ್ದು ಕ್ರಿಯಾಶೀಲ ಛಾಯಾಗ್ರಾಹಕ ಗಣೇಶ್ ಪತ್ತಾರ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಉಳಿದಂತೆ  ಖಜಾಂಚಿಯಾಗಿ ಚಂದ್ರಶೇಖರ ಭಟ್ಟ,ಉಪಾಧ್ಯಕ್ಷರಾಗಿ ವಿನಾಯಕ ಗುಮ್ಮಾನಿ ಸಂಘಟನಾ ಕಾರ್ಯದರ್ಶಿ ಶಶಿಕಾಂತಯ್ಯ ಆರ್.ಬಿ , ಜಂಟಿ ಕಾರ್ಯದರ್ಶಿ ಯಾಗಿ ಮೋಹನ್ ಆವರ್ಸಾ, ಯಲ್ಲಾಪುರ ಆಸರೆ ಯೋಜನೆ ಮೇಲ್ವಿಚಾರಕ ರಾಕೇಶ್ ಡೊಂಗರೇಕರ್ ಹಾಗು ಗೌರವಾಧ್ಯಕ್ಷರಾಗಿ ಗಣಪತಿ ಆರ್ ಹೆಗಡೆ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಫೋಟೋಗ್ರಾಫರ್ ಯೂನಿಯನ್ ಸದಸ್ಯರು ಜಿಲ್ಲಾ ಸಂಘಟನೆ ಪ್ರಮುಖರು ಇನ್ನಿತರರು ಉಪಸ್ಥಿತರಿದ್ದರು.

ವಿಡಿಯೋ  ವೀಕ್ಷಣೆಗೆ ಈ ಮೇಲಿನ ಲಿಂಕ್ ಕ್ಲಿಕ್ ಮಾಡಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *