
ಪ್ರತಿಧ್ವನಿ ಯಲ್ಲಾಪುರ : ಕಳೆದ ವರ್ಷ ಡೋಮಗೇರಿ ಗೌಳಿವಾಡ ಕ್ರಾಸ್ ಬಳಿ ದುರ್ಘಟನೆಯೊಂದು ಸಂಭವಿಸಿತ್ತು. ಡೋಮಗೇರಿ ಅಂಗನವಾಡಿಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಹಿಳೆ ಹಾಗೂ ಮಕ್ಕಳ ಮೇಲೆ ಮರ ಬಿದ್ದು, ಮಹಿಳೆ ಮತ್ತು ಮಕ್ಕಳು ಮೃತಪಟ್ಟ ಅಹಿತಕರ ಘಟನೆ ನಡೆದಿತ್ತು.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಶಿವರಾಮ ಹೆಬ್ಬಾರ್ ಅವರು, ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, “ಡೋಮಗೇರಿ ಗೌಳಿವಾಡದಲ್ಲೇ ನೂತನ ಅಂಗನವಾಡಿ ಕೇಂದ್ರವನ್ನು ಆರಂಭಿಸಲಾಗುವುದು” ಎಂದು ಭರವಸೆ ನೀಡಿದ್ದರು.

ಅದೇ ಭರವಸೆಯನ್ನು ಕಾರ್ಯರೂಪಕ್ಕೆ ತಂದಿರುವ ಶಾಸಕ ಶಿವರಾಮ ಹೆಬ್ಬಾರ್ ಅವರು, ಇಂದು ಡೋಮಗೇರಿ ಗೌಳಿವಾಡದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸುವ ಮೂಲಕ ತಾವು ನೀಡಿದ್ದ ಮಾತನ್ನು ಈಡೇರಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ತಾಲೂಕಾಧ್ಯಕ್ಷ ಮಾಕು ಕೊಕರೆ ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಧನಗರ ಗೌಳಿ ಸಮುದಾಯದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.















Prathidvani Yellapura