Breaking News

ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಮ್ ಓರಿಯಂಟೇಶನ್ “ಯುವ ಪರ್ವ”ಕ್ಕೆ  ಚಾಲನೆ

ಪ್ರತಿಧ್ವನಿ ಯಲ್ಲಾಪುರ: ಯಲ್ಲಾಪುರದ “ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಕೇವಲ ಪಠ್ಯ ಬೋಧನೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸವಾಂಗೀಣ ವಿಕಸನಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ವಿಶಿಷ್ಟ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಲು ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್., ಹಾಗೂ ಯೂತ್ ರೆಡ್ ಕ್ರಾಸ್‌ನಂತಹ ಹಲವು ತರಬೇತಿ ವೇದಿಕೆಗಳು ಲಭ್ಯವಿವೆ” ಎಂದು ಕಾಲೇಜಿನ ಕ್ರಿಯಾಶೀಲ ಪ್ರಾಂಶುಪಾಲ ಡಾ,ಆರ್.ಡಿ.ಜನಾರ್ಧನ್ ಹೇಳಿದರು.

ಅವರು ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ 2026-27 ನೇ ಸಾಲಿನ ಬಿ.ಕಾಮ್ ಪ್ರಥಮ ವರ್ಷದ ನೂತನ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಕಾಲೇಜಿನ ವಾತಾವರಣಕ್ಕೆ ಬರಮಾಡಿಕೊಳ್ಳುವ ಉದ್ದೇಶದಿಂದ ಕಾಲೇಜಿನ ಕದಂಬ ವೈಭವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಓರಿಯಂಟೇಶನ್ ಕಾರ್ಯಕ್ರಮ ಹಾಗೂ “ಯುವ ಪರ್ವ” ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದುವರಿದು ಮಾತನಾಡಿದ ಅವರು, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬರಿ ಅಂಕಪಟ್ಟಿ ಅಥವಾ ಪದವಿ ಪ್ರಮಾಣಪತ್ರ ಮಾತ್ರ ಸಾಲುವುದಿಲ್ಲ. ಬದಲಾಗಿ ವೃತ್ತಿಪರ ಕೌಶಲಗಳು, ಕಮ್ಯುನಿಕೇಶನ್ ಕೌಶಲ, ಮತ್ತು ಕಠಿಣ ಪರಿಶ್ರಮ ಅತಿ ಮುಖ್ಯ. ವಾಣಿಜ್ಯ ಕ್ಷೇತ್ರವು ದಿನದಿಂದ ದಿನಕ್ಕೆ ಜಾಗತಿಕವಾಗಿ ವಿಸ್ತರಿಸುತ್ತಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಂತ್ರಜ್ಞಾನ ಹಾಗೂ ಡಿಜಿಟಲ್ ಯುಗದ ಬದಲಾವಣೆಗಳಿಗೆ ತೆರೆದುಕೊಳ್ಳಬೇಕು. ಕಾಲೇಜಿನ ಸುಸಜ್ಜಿತ ಗ್ರಂಥಾಲಯ, ಇ-ರೈಸೋರ್ಸ್ ಹಾಗೂ ಅನುಭವಜ್ಞ ಉಪನ್ಯಾಸಕರ ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಗರಿಷ್ಠ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

  ಪದವಿ ಶಿಕ್ಷಣದ ಮೂರು ವರ್ಷಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ನಿರ್ಣಾಯಕ ಅವಧಿಯಾಗಿದೆ. ಕಾಲೇಜಿನಲ್ಲಿ ದೊರೆಯುವ ಗ್ರಂಥಾಲಯ, ತಂತ್ರಜ್ಞಾನ ಹಾಗೂ ಉಪನ್ಯಾಸಕರ ಮಾರ್ಗದರ್ಶನವನ್ನು ಸರಿಯಾಗಿ ಬಳಸಿಕೊಂಡು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು” ಎಂದು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳೊಂದಿಗೆ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಲತಾ ಪೂಜಾರಿ ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ವಿಜಯಪುರ ಇಂಡಿ ಕಾಲೇಜ್ ಪ್ರಾಂಶುಪಾಲ ಡಾ,  ಆರ್. ಹೆಚ್. ರಮೇಶ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ ಪರಿಪಾಲನೆ ಮತ್ತು ನಿರಂತರ ಪ್ರಯತ್ನಗಳ ಮಹತ್ವವನ್ನು ಪ್ರತಿಪಾದಿಸಿದರು. ಕೇವಲ ಅಂಕಗಳಿಕೆಗೆ ಆದ್ಯತೆ ನೀಡದೆ, ಮೌಲ್ಯಾಧಾರಿತ ಶಿಕ್ಷಣವನ್ನು ಮೈಗೂಡಿಸಿಕೊಳ್ಳಬೇಕೆಂದು ಹಿತನುಡಿ ನುಡಿದರು.

ಇದೇ ಸಂದರ್ಭದಲ್ಲಿ ನೂತನವಾಗಿ ಪ್ರವೇಶ ಪಡೆದ ಬಿ.ಕಾಮ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ಅಧಿಕೃತ ಗುರುತಿನ ಚೀಟಿಗಳನ್ನು (ಐ.ಡಿ. ಕಾರ್ಡ್) ಗಣ್ಯರ ಹಸ್ತದಿಂದ ವಿತರಿಸಿ, ಕಾಲೇಜಿನ ಕುಟುಂಬಕ್ಕೆ ಅಧಿಕೃತವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಕಾಲೇಜಿನ ಹಳೆಯ ವಿದ್ಯಾರ್ಥಿನಿ (Alumni)  ಶ್ರೀಲಕ್ಷ್ಮೀ ಹೆಗಡೆ ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. “ಈ ಕಾಲೇಜು ನಮಗೆ ಉತ್ತಮ ಶೈಕ್ಷಣಿಕ ಅಡಿಪಾಯದ ಜೊತೆಗೆ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ನೀಡಿದೆ” ಎಂದು ಹೇಳುತ್ತಾ ನೂತನ ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕ ಮಾತುಗಳನ್ನಾಡಿದರು. ತದನಂತರ, ಬಿ.ಕಾಮ್ ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾಲೇಜಿನ ಮೊದಲ ದಿನದ ಅನುಭವಗಳು, ಕಾಲೇಜಿನ ಶೈಕ್ಷಣಿಕ ವಾತಾವರಣ ಹಾಗೂ ತಮ್ಮ ಭವಿಷ್ಯದ ಗುರಿಗಳ ಕುರಿತು ಮುಕ್ತವಾಗಿ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಬಿ.ಕಾಮ್ ವಿಭಾಗದ ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವಿದ್ಯಾರ್ಥಿನಿಯರಾದ ವಿನುತಾ, ಶೃತಿ ಪ್ರಾರ್ಥಿಸಿದರು, ಬಿ.ಕಾಮ್ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ  ಭಾಗ್ಯಶ್ರೀ ಸ್ವಾಗತಿಸಿದರು.
ಬಿ.ಕಾಮ್ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ  ಸಹನಾ ಗೌಡ ನಿರೂಪಣೆ ಮಾಡಿದರು.ಕೊನೆಯಲ್ಲಿ, ಬಿ.ಕಾಮ್ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ  ಅಕ್ಷತಾ ಗೌಡ ವಂದಿಸಿದರು.

https://www.facebook.com/share/v/1M5vB7J7H2/

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *