Breaking News

ಮಂಗಳೂರು ಹೈಕೋರ್ಟ್ ಸಂಚಾರಿ ಪೀಠಕ್ಕೆ ಉತ್ತರ ಕನ್ನಡ ಜಿಲ್ಲೆ ಸೇರ್ಪಡೆ ಶಾಸಕ  ಹೆಬ್ಬಾರ್ ವಿರೋಧ – ಹೋರಾಟಕ್ಕೆ ಬೆಂಬಲ ಘೋಷಣೆ.

ಪ್ರತಿಧ್ವನಿ ಯಲ್ಲಾಪುರ: ಮಂಗಳೂರಿನಲ್ಲಿ ಪ್ರಸ್ತಾಪಿಸಲಾಗಿರುವ ಹೈಕೋರ್ಟ್ ಸಂಚಾರಿ ಪೀಠಕ್ಕೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆ ಮಾಡುವ ಪ್ರಸ್ತಾವನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲಾ ಬಾರ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿರುವ ಶಾಸಕ ಶಿವರಾಮ ಹೆಬ್ಬಾರ್ ಅವರು, ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆ ಜಿಲ್ಲೆಯ ಜನರಿಗೆ ಅನಾನುಕೂಲ ಉಂಟುಮಾಡಲಿದೆ ಎಂದು ತಿಳಿಸಿದ್ದಾರೆ.

“ಉತ್ತರ ಕನ್ನಡ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಈ ಪ್ರಸ್ತಾವನೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ. ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಬಾರ್ ಅಸೋಸಿಯೇಷನ್‌ನ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲೆಯ ಜನರಿಗೆ ನ್ಯಾಯ ದೊರೆಯುವ ರೀತಿಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸಿದರೆ ಜಿಲ್ಲೆಯ ದೂರದ ಪ್ರದೇಶಗಳ ಜನರು ನ್ಯಾಯಾಂಗ ಸೇವೆ ಪಡೆಯಲು ಸುಮಾರು 400 ಕಿಲೋಮೀಟರ್‌ವರೆಗೆ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಸಮಯ, ಹಣ ಹಾಗೂ ಪ್ರಯಾಣದ ತೊಂದರೆ ಉಂಟಾಗುವ ಸಾಧ್ಯತೆಯಿದೆ.

ಆದ್ದರಿಂದ ಜಿಲ್ಲೆಯ ಭೌಗೋಳಿಕ ವ್ಯಾಪ್ತಿ, ಜನರ ಅನುಕೂಲ ಹಾಗೂ ನ್ಯಾಯಾಂಗ ಸೇವೆ ಪಡೆಯುವ ಹಕ್ಕನ್ನು ಪರಿಗಣಿಸಿ ಯಾವುದೇ ನಿರ್ಧಾರ ಕೈಗೊಳ್ಳಬೇಕು. ಉತ್ತರ ಕನ್ನಡ ಜಿಲ್ಲೆಯ ಜನರ ಹಿತಕ್ಕೆ ಧಕ್ಕೆ ತರುವ ಯಾವುದೇ ಪ್ರಸ್ತಾವನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರು ಸ್ಪಷ್ಟಪಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *