Breaking News

ಅನಾರೋಗ್ಯದಿಂದ ನಿಧನರಾದ ಯಲ್ಲಾಪುರ ಠಾಣೆ ಎ.ಎಸ್.ಐ ನೀಲಕಂಠಾಚಾರಿ – ಅಧಿಕಾರಿಗಳು ಸಾರ್ವಜನಿಕರ ಸಂತಾಪ.


ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ಠಾಣೆಯಲ್ಲಿ ಹಲವು ವರ್ಷಗಳಿಂದ ಎ‌ಎಸ್.ಐ ಆಗಿ ಸೇವೆ ಸಲ್ಲಿಸುತ್ತಾ ಸಾರ್ವಜನಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ನೀಲಕಂಠ ಆಚಾರಿ ಯವರು ತಮ್ಮ ಸ್ವ ಗೃಹದಲ್ಲಿ ನಿಧನರಾಗಿದ್ದು ಅಪಾರ ಬಂದು ಬಳಗ ಮತ್ತು ಹಿತೈಷಿಗಳು ಹಾಗು ಸಹೋದ್ಯೋಗಿಗಳನ್ನು ಅಗಲಿದ್ದಾರೆ.
ನೀಲಕಂಠಾಚಾರಿ ಯವರು ಮೂಲತಃ ಕಾರವಾರದ ಆಮದಳ್ಳಿ ಯವರಾಗಿದ್ದು 55 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಉಡುಪಿ ಆಸ್ಪತ್ರಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಬುಧವಾರ ದಂದು ಇಹ ಲೋಕ ತ್ಯಜಿಸಿದ್ದು ಪತ್ನಿ,ಇಬ್ಬರು ಪುತ್ರರನ್ನು ಹಾಗು ಅಪಾರ ಬಂಧು ಬಳಗ ಹಿತೈಷಿಗಳನ್ನು ಅಗಲಿದ್ದಾರೆ ಅಂತ್ಯಕ್ರಿಯೆ ಕಾರವಾರದ ಆಮದಳ್ಳಿಯಲ್ಲೆ ಜರುಗಲಿದ್ದು, ಯಲ್ಲಾಪುರ ಠಾಣೆಯ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಹಾಗು ಯಲ್ಲಾಪುರದ ಅನೇಕ ನಾಗರಿಕರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *