
ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತ ನಾಯಕ ರೈತರ ಕಷ್ಟಗಳನ್ನು ಹತ್ತಿರದಿಂದ ಕಂಡ ಶಾಸಕ ಶಿವರಾಮ ಹೆಬ್ಬಾರ್ ಅವರ ಸತತ ಪ್ರಯತ್ನದ ಫಲವಾಗಿ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿದೆ.
ಮಳೆಯ ಅಭಾವದಿಂದ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದು ಎರಡೂ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ ಆದೇಶ ಹೊರಡಿಸಿದೆ.

ಈ ಘೋಷಣೆಯಿಂದ ಬರಗಾಲದ ಪರಿಣಾಮದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಸರ್ಕಾರದ ವಿವಿಧ ಪರಿಹಾರ ಹಾಗೂ ನೆರವು ಯೋಜನೆಗಳು ದೊರೆಯಲು ಅನುಕೂಲವಾಗಲಿದೆ.
ರೈತರ ಸಂಕಷ್ಟಕ್ಕೆ ಸ್ಪಂದಿಸಿ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲು ಸಹಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಂದಾಯ ಸಚಿವರು ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.






Prathidvani Yellapura