Breaking News

ಯಲ್ಲಾಪುರದ ಸ್ವಾತಂತ್ರ್ಯ ಸಂಭ್ರಮಕ್ಕೆ ಮಕ್ಕಳ ಬಾಯಿ ಸಿಹಿಯಾಗಿಸಿದ ಲಾರಿ ಚಾಲಕರ ಸಂಘ.


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಲಾರಿ ಚಾಲಕರ ಸಂಘದ ವತಿಯಿಂದ ಸಿಹಿ ಹಂಚಿ ಬಾಯಿ ಸಿಹಿ ಮಾಡಲಾಯಿತು.


ದೇಶಕ್ಕೆ 80 ನೆ ವರ್ಷದ ಸ್ವಾತಂತ್ರ್ಯ ಸಂಭ್ರಮ ಎಲ್ಲೆಡೆ ತ್ರಿವರ್ಣ ಧ್ವಜದ ಹಾರಾಟ ಇಂತಹ ಸಂತಸದ ಸನ್ನಿವೇಶದಲ್ಲಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಲಾರಿ ಚಾಲಕರ ಸಂಘ ಬದ್ದತೆಯ ಕಾರ್ಯ ಮಾಡಿದರು.


ಸಂಘದ ಅಧ್ಯಕ್ಷ ಸಂತೋಷ ನಾಯ್ಕ್ ಮಾರ್ಗ ದರ್ಶನದಲ್ಲಿ.ಉಪಾಧ್ಯಕ್ಷ ಶಂಕರ್ ಅತ್ತರವಾಲ, ಕಾರ್ಯದರ್ಶಿ ಸಂದೀಪ್ ವಡ್ಡರ್ ಹಾಗು ಪ್ರಮುಖರಾದ ಅಲ್ತಾಫ್,ಶ್ರೀನಿವಾಸ, ಆದಂ, ತಂಜಿಮ್ ಸೇರಿದಂತೆ ಇನ್ನಿತರರು ಪಾಲ್ಗೊಂಡು ಸಿಹಿ ಹಂಚಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *