
ಪ್ರತಿಧ್ವನಿ ಯಲ್ಲಾಪುರ : ಶಾಸಕ ಶಿವರಾಮ ಹೆಬ್ಬಾರ್ ಶನಿವಾರ ಯಲ್ಲಾಪುರ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕರು, ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುವ ವಿವಿಧ ಪರಿಕರಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳ ದುರಸ್ತಿ ದರಪಟ್ಟಿಯನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ದ್ವಿಚಕ್ರ ವಾಹನಗಳ ದುರಸ್ತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಕಲ್ಯಾಣಕ್ಕಾಗಿ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಶಾಸಕರು ಮಾತನಾಡಿದರು. ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಂಡು ತಮ್ಮ ವೃತ್ತಿ ಹಾಗೂ ಜೀವನಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಕಾರ್ಮಿಕ ಇಲಾಖೆಯಿಂದ ನೀಡುವ ಉಚಿತ ಕಿಟ್ ಪಡೆದ ಫಲಾನುಭವಿಗಳು ಇತರರು ಉಪಸ್ಥಿತರಿದ್ದರು.






Prathidvani Yellapura