Breaking News

ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಹೆಸರು ಸೂಚಿಸಿ ಪ್ರಸ್ತಾವನೆ ಸಲ್ಲಿಕೆ – ಶಾಸಕ ಹೆಬ್ಬಾರ್ ಸಾಥ್.


ಪ್ರತಿಧ್ವನಿ ಯಲ್ಲಾಪುರ : ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ನಡೆದ ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಕೊನೆ ಗಳಿಗೆಯವರೆಗು ಪಟ್ಟಿಯಲ್ಲಿ ಸ್ಥಾನ ಪಡೆದು ಅಂತಿಮ ಹಂತದಲ್ಲಿ ಪಟ್ಟಿಯಿಂದ ಹೊರಗುಳಿದು ರಾಜ್ಯಾದ್ಯಂತ ಸುದ್ದಿಯಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರನ್ನು ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸಿ ವಿಧಾನಸಭಾ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ಥಾವನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಶಿವರಾಮ ಹೆಬ್ಬಾರ್ ಕೂಡ ಸಾಥ್ ನೀಡಿದ್ದಾರೆ,ಜೊತೆಯಲ್ಲಿ ಉತ್ತರ ಕನ್ನಡ ಉಸ್ತುವಾರಿ ಮಂತ್ರಿ ಲಕ್ಷ್ಮಣ ಸವದಿ ಹಾಗು ಮಂತ್ರಿ ಹೆಚ್.ಸಿ.ಬಾಲಕೃಷ್ಣ ಕೂಡ ಉಪಸ್ಥಿತರಿದ್ದಾರೆ.


ಕಳೆದ ಬಾರಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮೀನುಗಾರಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಡಿ.ಕೆ.ಶಿ ಸಂಪುಟ ರಚನೆ ಸಂದರ್ಭದಲ್ಲಿ ಕೊನೆ ಹಂತದವರೆಗೆ ವೈದ್ಯ ಅವರ ಹೆಸರು ಮಂತ್ರಿ ಪಟ್ಟಿಯಲ್ಲಿ ಗಟ್ಟಿಯಾಗಿ ಕೇಳಿ ಬಂದಿತು ಅದಾವ ಮಾಯೆಯೊ ಎಂಬಂತೆ ಹೆಸರು ಘೋಷಣೆಯಾಗುತ್ತಲೆ ಮಂಕಾಳ ವೈದ್ಯರ ಹೆಸರು ಮಾಯವಾಗಿತ್ತು. ಇದೀಗ ಮೀನುಗಾರ ಸಮುದಾಯಗಳಿಗೆ ಸಮಾದಾನಪಡಿಸಲು ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಾಡಲು ಡಿಕೆಶಿ ಮುಂದಾಗಿದ್ದಾರೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *