Breaking News

ಕಸ್ತೂರಿ ರಂಗನ್ ಅವೈಜ್ಞಾನಿಕ 7 ನೆ ಅಧಿಸೂಚನೆ ವರದಿ ವಿರುದ್ದ ಹೋರಾಟಕ್ಕೆ ಪೂರ್ವಬಾವಿ ಸಭೆ.


ಪ್ರತಿಧ್ವನಿ ಯಲ್ಲಾಪುರ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಗೆ 7 ನೇ ಅಧಿಸೂಚನೆ ಆಗಿರುವ ಹಿನ್ನಲೆಯಲ್ಲಿ ಯಲ್ಲಾಪುರ ತಾಲೂಕಿನಲ್ಲಿ ಘೋಷಿಸಲ್ಟಟ್ಟ ಸೂಕ್ಷ್ಮ ಪ್ರದೇಶದ ಪಟ್ಟಿಯ ಬಿಡುಗಡೆ ಮತ್ತು ಮುಂದಿನ ಹೋರಾಟದ ರೂಪು ರೇಷೆ ನಿರ್ಧರಿಸಲು ಅಗಸ್ಟ 24 ರ ಸೋಮವಾರ, ಮುಂಜಾನೆ 10 ಗಂಟೆಗೆ ಸ್ಥಳೀಯ ವೆಂಕಟರಮಣ ದೇವಸ್ಥಾನ ಸಭಾಭವನದಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಸಂಚಾಲಕ ಚಂದ್ರಶೇಖರ ಪೂಜಾರಿ ಮಂಚಿಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಅಸ್ತಿತ್ವಕ್ಕಾಗಿ ಹಗಲಿರುಳು ಶ್ರಮಿಸುತ್ತಾ ಅರಣ್ಯ ವಾಸಿಗಳ ಮನೆಯ ಮಗನಾಗಿ ನಿಸ್ವಾರ್ಥ ಭಾವದಲ್ಲಿ ಹೋರಾಟಮಾಡುತ್ತ ನೊಂದವರ ಧ್ವನಿಯಾಗಿ ಹೋರಾಟದ ಕಿಡಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಈ ಸಭೆಯಲ್ಲಿ ಉಪಸ್ಥಿತರಿರುವವರು.

ಜುಲೈ 27 ರಂದು ಕಸ್ತೂರಿ ರಂಗನ್ ಸೂಕ್ಷ್ಮ ಪ್ರದೇಶದ 7 ನೇ ಅಧಿಸೂಚನೆ ಆಗಿರುವ ಹಿನ್ನಲೆಯಲ್ಲಿ ಮಹತ್ವ ಪೂರ್ಣ ಸಭೆಗೆ ಆಸಕ್ತರು ಆಗಮಿಸಿ ಮುಂದಿನ ಹೋರಾಟದ ರೂರು ರೇಷೆಗೆ ಸಲಹೆ ಸೂಚನೆ ಕೊಡಲು ಅವರು ಕೋರಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *