
ಪ್ರತಿಧ್ವನಿ ಯಲ್ಲಾಪುರ : ಸದಾ ಒಂದಲ್ಲ ಒಂದು ಸಮಾಜಮುಖಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮನುಷ್ಯನ ಅತಿ ಪ್ರಮುಖ ಭಾಗವಾದ ಹೃದಯಕ್ಕೆ ಸಂಬಂಧಿಸಿದಂತೆ ಉಚಿತ ತಪಾಸಣ ಶಿಭಿರವನ್ನು ಆಗಸ್ಟ್ 23 ರ ಬೆಳಗ್ಗೆ 10 ಗಂಟೆಯಿಂದ ಹಮ್ಮಿಕೊಂಡಿದ್ದು ಸಾರ್ವಜನಿಕರು ಶಿಭಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಮಾದ್ಯಮ ಪ್ರಕಟಣೆ ಹೊರಡಿಸಿದೆ.

ವಿಶ್ವದರ್ಶನ ಸೇವಾ ಹಾಗೂ ಹುಬ್ಬಳ್ಳಿಯ ವಿಹಾನ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯವರ ಸಹಯೋಗದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರ ಆಗಸ್ಟ್ 23ರಂದು ಬೆಳಗ್ಗೆ 10 ಗಂಟೆಯಿಂದ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹದ ಆವಾರದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಬಿಪಿ, ಇಸಿಜಿ, 2ಡಿ ಇಕೋ ಹಾಗೂ ಹೃದಯ ಸಂಬಂಧಿ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು. ಹೃದಯ ಸಂಬಂಧಿತ ಸಮಸ್ಯೆಗಳಿರುವವರು ಹಾಗೂ ತಪಾಸಣೆ ಮಾಡಿಸಿಕೊಳ್ಳಲು ಬಯಸುವವರು ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು.
ಕಾರ್ಯಕ್ರಮದಲ್ಲಿ ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ,ಮಲೆನಾಡು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ. ಆರ್. ಹೆಗಡೆ, ಕುಂಬ್ರಿಗುಡ್ಡೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಭಟ್ ಹಾಸಣಗಿ, ಮದನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ದೇಸಾಯಿ, ಸಂಕಲ್ಪ ಸೇವಾ ಸಂಸ್ಥೆಯ ಕಾರ್ಯದರ್ಶಿ ಪ್ರಸಾದ ಹೆಗಡೆ, ವಿಶ್ವದರ್ಶನ ಸೇವಾದ ಸಂಯೋಜಕ ಶ್ರೀರಾಮ ಲಾಲಗುಳಿ ಉಪಸ್ಥಿತರಿರುವರು.
ಹೆಚ್ಚಿನ ಮಾಹಿತಿಗಾಗಿ 9483213106, 6366919550 ಸಂಪರ್ಕಿಸಬಹುದು.









Prathidvani Yellapura