Breaking News

ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಬಿಜೆಪಿ–ಜೆಡಿಎಸ್ ಧೋರಣೆ ಖಂಡಿಸಿ ಪ್ರತಿಭಟನೆ – ಶಾಸಕ ಹೆಬ್ಬಾರ್ ಭಾಗಿ.

ಪ್ರತಿಧ್ವನಿ ಯಲ್ಲಾಪುರ – ಬೆಂಗಳೂರು: ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ವಿಧಾನಮಂಡಲ ಅಧಿವೇಶನದಲ್ಲಿ ಅವಕಾಶ ನೀಡದೆ, ಗದ್ದಲದ ಮೂಲಕ ಕಲಾಪದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಧೋರಣೆಯನ್ನು ಖಂಡಿಸಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಪಾಲ್ಗೊಂಡು, ಪ್ರತಿಪಕ್ಷಗಳ ಈ ಧೋರಣೆಯನ್ನು ಖಂಡಿಸಿದರು.

ರಾಜ್ಯದ ಜನರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕಾಗಿದ್ದು, ಗದ್ದಲ ಸೃಷ್ಟಿಸುವ ಮೂಲಕ ಕಲಾಪಕ್ಕೆ ಅಡ್ಡಿಪಡಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *