Breaking News

ವಿಶ್ವ ದರ್ಶನ ಶಿಕ್ಷಣ ಸೇವೆಗು ಸೈ – ಸಮಾಜ ಸೇವೆಗು ಜೈ – ಎಂ‌.ಆರ್.ಹೆಗಡೆ ಕುಂಬ್ರಿಗುಡ್ಡೆ.


ಪ್ರತಿಧ್ವನಿ ಯಲ್ಲಾಪುರ : ಸಮಾಜಕ್ಕೆ ಹಿತವನ್ನೇ ಬಯಸುವ ಆಶಯವನ್ನು ಕೇವಲ ಮಾತಿಗೆ ಸೀಮಿತವಾಗಿಸದೇ, ಕೃತಿಯ ಮೂಲಕ ವಿಶ್ವದರ್ಶನ ಸೇವಾ ತೋರಿಸುತ್ತಿದೆ. ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ನೀಡುತ್ತಿದೆ. ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳಲ್ಲಿಯೂ ಮುಂಚೂಣಿಯಲ್ಲಿದೆ ಎಂದು ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್ ಹೆಗಡೆ ಕುಂಬ್ರಿಗುಡ್ಡೆ ಹೇಳಿದರು.


ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಸೇವಾ, ಹುಬ್ಬಳ್ಳಿಯ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಚಿತ ಹೃದಯರೋಗ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಮಾತನಾಡಿ, ವಿಶ್ವದರ್ಶನ ಸೇವಾ ಮೂಲಕ ಅನೇಕ ಆರೋಗ್ಯ ಸಂಬಂಧಿ ಸೇವೆಗಳನ್ನು, ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಅನಾರೋಗ್ಯಕ್ಕೆ ಒಳಗಾದ ಮೇಲೆ ಚಿಕಿತ್ಸೆಗೆ ಹೋಗುವ ಬದಲು, ಶಿಸ್ತುಬದ್ಧ ಜೀವನ, ಮುನ್ನೆಚ್ಚರಿಕೆಯ ಮೂಲಕ ರೋಗ ಬರದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಗಂಭೀರವಾಗಿ ಗಮನ ಹರಿಸಬೇಕು. ಗಟ್ಟಿಯಾದ ಮನಸ್ಸಿನಿಂದ ಶಿಸ್ತುಬದ್ಧ ಜೀವನ ಶೈಲಿ ರೂಢಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆರೋಗ್ಯ ವಿಮೆಯನ್ನು ಪ್ರತಿಯೊಬ್ಬರೂ ಮಾಡಿಸಿಕೊಂಡಲ್ಲಿ, ಅನಾರೋಗ್ಯದ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎಂದರು.


ಎಲ್ಎಸ್ಎಂಪಿ ಸೊಸೈಟಿ, ವಿಶ್ವದರ್ಶನ ಸೇವಾದ ಸಹಯೋಗದಲ್ಲಿ ವಿಹಾನ್ ಆಸ್ಪತ್ರೆಯ ಆರೋಗ್ಯ ಕಾರ್ಡ್ ಮಾಡಿಸುವ ಆಲೋಚನೆಯಿದೆ. ಅದರ ಮೂಲಕ ವಿಹಾನ್ ಆಸ್ಪತ್ರೆಯಲ್ಲಿ ಯಲ್ಲಾಪುರ ಭಾಗದ ರೋಗಿಗಳಿಗೆ ಆದ್ಯತೆಯ ಹಾಗೂ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವಂತೆ ಮಾಡುವ ಕುರಿತು ಪ್ರಸ್ತಾಪಿಸಿ, ಇದಕ್ಕೆ ಕೈಜೋಡಿಸುವಂತೆ ಆಸ್ಪತ್ರೆಯ ಪ್ರಮುಖರಲ್ಲಿ ಮನವಿ ಮಾಡಿದರು.
ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಮಹಾಂತೇಶ ಉಳ್ಳಾಗಡ್ಡಿ, ಪುಂಡಲೀಕ ಪೂಜಾರ, ಮದನೂರು ಸಹಕಾರಿ ಸಂಘದ ಅಧ್ಯಕ್ಷ ಮಹೇಶ ದೇಸಾಯಿ ಉಪಸ್ಥಿತರಿದ್ದರು.
ವಿಶ್ವದರ್ಶನ ಸೇವಾದ ಸಂಯೋಜಕ ಶ್ರೀರಾಮ ಲಾಲಗುಳಿ ಸ್ವಾಗತಿಸಿದರು. ಶಿವಪ್ರಸಾದ ನಿರ್ವಹಿಸಿದರು. ಮುಕ್ತಾ ಶಂಕರ ವಂದಿಸಿದರು.
ನಂತರ ‌ನಡೆದ ಶಿಬಿರದಲ್ಲಿ ಶಿಬಿರದಲ್ಲಿ 132 ಜನರು ತಪಾಸಣೆಗೆ ಒಳಗಾಗಿದ್ದು 20 ಜನರಿಗೆ ಹೆಚ್ಚಿನ ಚಿಕಿತ್ಸೆ ಪಡೆಯುವಮತೆ ಸೂಚಿಸಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *