Breaking News

ರೈತ ಮಕ್ಕಳಂತೆ ಬೆಳೆದ ಅಡಿಕೆ ಮರ ಕಡಿಯುವ ಹಕ್ಕು ಅರಣ್ಯ ಇಲಾಖೆಗಿಲ್ಲ ಇಂತಹ ನಡೆ ಖಂಡನಾರ್ಹ – ಅನಂತಮೂರ್ತಿ ಹೆಗಡೆ ಗುಡುಗು.


ಪ್ರತಿಧ್ವನಿ ಯಲ್ಲಾಪುರ – ಅಡಿಕೆ ಮರವನ್ನು ಕಡಿಯುವ ಹಕ್ಕನ್ನು ಅರಣ್ಯ ಇಲಾಖೆಗೆ ಯಾರೂ ಕೊಟ್ಟಿಲ್ಲ.ಮರಗಳನ್ನು ಕುಡಿಯಬೇಕು ಎಂದು ಅರಣ್ಯ ಇಲಾಖೆಯ ಯಾವ ನಿಯಮದಲ್ಲಿದೇ? ಮರವನ್ನು ಉಳಿಸಿ ಬೆಳೆಸುವುದು ಅರಣ್ಯ ಇಲಾಖೆ ಕರ್ತವ್ಯ ಮರಕಡಿಯುವುದಲ್ಲ. ಅರಣ್ಯ ಇಲಾಖೆಯ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅರಣ್ಯ ಇಲಾಖೆ ನಡೆಯ ವಿರುದ್ಧ ಗುಡುಗಿದರು.

ಯಲ್ಲಾಪುರ ತಾಲೂಕಿನ ಕುಂದರಗಿ ಪಂಚಾಯತ್ ವ್ಯಾಪ್ತಿಯ ಬೆಳ್ಳಂಬೆಯ ಸದಾಶಿವ ನಾಯ್ಕ ಅವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮರಕಡಿದ ಜಾಗಕ್ಕೆ ಭೇಟಿ ನೀಡಿ ರೈತನಿಗೆ ಧೈರ್ಯ ತುಂಬಿ ಮಾತನಾಡಿದ ಅವರು, ಸುಮಾರು 50 ವರ್ಷದಿಂದ ವಾಸವಿದ್ದ”ಸದಾಶಿವ ನಾಯ್ಕ್ ಬೆಳ್ಳಂಬೆ ಅವರಿಗೆ ಸೇರಿದ ಸುಮಾರು 6ರಿಂದ 7 ವರ್ಷದ 40 ಅಡಿಕೆ ಗಿಡಗಳನ್ನು ಫಾರೆಸ್ಟ್ ಅಧಿಕಾರಿಗಳು ಕಡಿದು ನೆಲಸಮ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ.

ಇದು ಸದಾಶಿವ ನಾಯ್ಕ ಅವರ ಕಣ್ಣೀರಿಗೆ ಕಾರಣವಾಗಿದೆ. ಸದಾಶಿವ ನಾಯ್ಕ ಅವರು ಕೂಲಿ ಕೆಲಸಕ್ಕೆ ಹೋದ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಅಮಾನುಷವಾಗಿ ಅಡಿಕೆ ಮರಗಳನ್ನು ಕಡಿದಿದ್ದಾರೆ. ಇವರು ಹತ್ತಾರು ಎಕರೆ ಜಮೀನು ಹೊಂದಿದವರಲ್ಲ. ಹಾಗೂ ನಿನ್ನೆ ಮೊನ್ನೆಯಿಂದ ಕೃಷಿ ಮಾಡುತ್ತಿಲ್ಲ. ಸಾಕಷ್ಟು ವರ್ಷಗಳಿಂದ ಇದೇ ಊರಿನಲ್ಲಿ ಕೃಷಿಯನ್ನು ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಅರಣ್ಯ ಇಲಾಖೆಗೆ ರೈತರ ಬಗ್ಗೆ ಕನಿಕರ ಇರಬೇಕು. ಅಡಿಕೆ ಮರವನ್ನು ಕಡಿಯಲು ಯಾರೂ ಇವರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಅರಣ್ಯ ಇಲಾಖೆಯ ಈ ಕ್ರಮ ಖಂಡನೀಯ. ರೈತರ ಪರವಾಗಿ ಸದಾ ನಾವು ಇರಲಿದ್ದೇವೆ ಎಂದರು.


ಈ ಸಂದರ್ಭದಲ್ಲಿ ಬಿಜೆಪಿ ಯಲ್ಲಾಪುರ ಉಪಾಧ್ಯಕ್ಷ ಗಣೇಶ ಹೆಗಡೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ದೀಪಾ ರಾಘವೇಂದ್ರ ಸಿದ್ದಿ ,ಮಾಳಕೊಪ್ಪ ಮಂಚಿಕೇರಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿನೇಶ್ ಭಟ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಬಾಬಣ್ಣ ಪತ್ರಕರ್, ರಾಮಕೃಷ್ಣ ಹೆಗಡೆ , ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸೀತಾರಾಮ್ ಗೌಡ , ಭರಣಿ ಬೂತ್ ಅಧ್ಯಕ್ಷ ಗಂಗಾಧರ ನಾಯಕ್ ಸೇರಿದಂತೆ ಹಲವರು ಇದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *