Breaking News

ಮಾಜಿ ಪ್ರಧಾನಿ ದಿ, ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಕ ಸುಧಾಕರ ನಾಯ್ಕ್ ಆಯ್ಕೆ.


ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ವತಿಯಿಂದ ಪ್ರಧಾನ ಮಾಡಲಾಗುವ ಮಾಜಿ ಪ್ರಧಾನಿ ದು,ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಕಂಚನಳ್ಳಿ ಸ.ಹಿ‌.ಪ್ರಾ ಶಾಲೆಯ ಕ್ರಿಯಾಶೀಲ ಶಿಕ್ಷಕ ಸುಧಾಕರ್ ಜಿ ನಾಯ್ಕ್ ಆಯ್ಕೆಯಾಗಿದ್ದು ಸೆ,5 ರಂದು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿನ “ಭಾರತ್ ಜೋಡೋ ಭವನ” ದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಆಧೇಶ ಹೊರಡಿಸಿದ್ದಾರೆ.


ಸುಧಾಕರ್ ನಾಯ್ಕ್ ಯಲ್ಲಾಪುರ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಜನಜನಿತವಾದ ಹೆಸರಾಗಿದೆ. ಸದಾ ಕ್ರಿಯಾಶೀಲತೆಯಿಂದ ಕೂಡಿದ ವ್ಯಕ್ತಿತ್ವ, ಸೇವಾ ಮನೋಭಾವ ಸಾಧನೆಯ ತುಡಿತ ಹೊಂದಿದ ಶಿಕ್ಷಕ.
ಈಗಾಗಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿರುವ ಸುಧಾಕರ ನಾಯ್ಕ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದು ತಾಲೂಕು ಕಾನೂನು ಸೇವಾ ಸಮಿತಿಯ ಲೀಗಲ್ ವಾಲಂಟಿಯರ್ ಆಗಿ ಮುಂದುವರೆದಿದ್ದಾರೆ.
ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಸಂಸ್ಥೆಗಳೊಂದಿಗೆ ಉತ್ತಮ ಭಾಂದವ್ಯ ಇರಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸದಾ ಶ್ರಮಿಸುತ್ತಾರೆ.
ಒರ್ವ ಸರ್ಕಾರಿ ನೌಕರನೆಂಬ ಹಮ್ಮುಬಿಮ್ಮು ಇಲ್ಲದೆ ಸದಾ ಜನರೊಂದಿಗೆ ಬೆರೆತು ಸಮಾಜ ಸೇವಾ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವ ಜನಸ್ನೇಹಿ ಶಿಕ್ಷಕ ರಾಗಿ ಗುರುತಿಸಿಕೊಂಡಿದ್ದಾರೆ.


ಸದ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಸುಧಾಕರ ನಾಯ್ಕ್ ಅವರನ್ನು ಆಯ್ಕೆ ಮಾಡಿರುವುದು ಯಲ್ಲಾಪುರ ತಾಲೂಕಿನ ಶಿಕ್ಷಕ ವರ್ಗಕ್ಕೆ ಮತ್ತು ಊರ ನಾಗರಿಕರಿಗೆ ಗೌರವ ತಂದ ವಿಷಯವಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಸುಧಾಕರ ನಾಯ್ಕ್ ಅವರಿಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತಾರಾಮ್ ಸಿದ್ದಿ, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ಸಂಕಲ್ಪ ಸೇವಾ ಸಂಸ್ಥೆ ಪ್ರಮೋದ್ ಹೆಗಡೆ, ಸಾಮಾಜಿಕ ಕಾರ್ಯಕರ್ತ ಬಾಲಕೃಷ್ಣ ನಾಯಕ್, ವರ್ತಕ ನಂದನ ಬಾಳಗಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕ ವರ್ಗ ಇತರೆ ಸಂಘ ಸಂಸ್ಥೆಗಳು, ಹಲವು ಪ್ರಮುಖರು ಶುಭ ಕೋರಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *