
ಪ್ರತಿಧ್ವನಿ ಯಲ್ಲಾಪುರ : ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ತಮ್ಮ ಜ್ಞಾನ, ಮೌಲ್ಯ ಹಾಗೂ ಆದರ್ಶಗಳ ಮೂಲಕ ಸಮಾಜದ ನಿರ್ಮಾಣದಲ್ಲಿ ಮಹತ್ತರ ಕೊಡುಗೆ ನೀಡುತ್ತಿದ್ದಾರೆ. ನನ್ನ ಕ್ಷೇತ್ರದ ಎಲ್ಲಾ ಶಿಕ್ಷಲರ ಮೇಲೆ ನನಗೆ ಅಪಾರವಾದ ಗೌರವವಿದ್ದು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಅವರೆಲ್ಲರಿಗು ಶಿಕ್ಷಕ ದಿನದ ಶುಭಾಶಯಗಳು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಶನಿವಾರ ಪಟ್ಟಣದ ವೆಂಕಟರಮಣ ಮಠದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಆನಗೋಡು ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಮಾರುತಿ ಆಚಾರಿ, ಶಿರನಾಲ ಸಹ ಶಿಕ್ಷಕ ಸತೀಶ್ ಶೆಟ್ಟಿ ಹಾಗು ಪ್ರೌಢಶಾಲಾ ವಿಭಾಗದಲ್ಲಿ ಕಿರವತ್ತಿ ಕೆಪಿಎಸ್ ಪ್ರೌಢಶಾಲೆ ಸಹ ಶಿಕ್ಷಕ ನಾಗರಾಜ್ ನಾಯ್ಕ್ ಅವರಿಗೆ ಶಾಸಕ ಶಿವರಾಮ ಹೆಬ್ಬಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪ್ರಾಥಮಿಕ ವಿಭಾಗದ ಮಂಗನತಾವರಗೇರಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ದೀಪಾ ಶೆಟ್ಟಿ,ಕನ್ನಡಗಲ್ ಸಹ ಶಿಕ್ಷಕಿ ಶೋಭಾ ನಾಯ್ಕ್, ಹುಟಕಮನೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಸುಭ್ರಾಯ ಭಟ್
ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ನಂದೊಳ್ಳಿ ಶಾಲೆ ಸಹ ಶಿಕ್ಷಕಿ ಅರ್ಚನ, ಯಲ್ಲಾಪುರದ ಹೊಲಿ ರೋಜರಿ ಶಾಲೆ ಸಹ ಶಿಕ್ಷಕ ವೆಂಕಟರಮಣ ಭಟ್ ಅವರಿಗೆ ಶಾಸಕ ಶಿವರಾಮ ಹೆಬ್ಬಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಮುಂದಿನ ದಿನಗಳಲ್ಲಿಯೂ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯಕ , ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್ ಹೊಸ್ಕೇರಿ, ಮುಖ್ಯಾಧಿಕಾರಿ ಕೇಶವ ಚೌಗುಲೆ, ರಾಜೇಂದ್ರ ಶೆಟ್ಟಿ, ಭಾರತ ಸೇವಾದಳ ಅಧ್ಯಕ್ಷ ಎಂ .ಆರ್.ಹೆಗಡೆ ಕುಂಬ್ರಿಗುಡ್ಡೆ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಜಯ್ ನಾಯ್ಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್, ದೈಹಿಕ ಶಿಕ್ಷಕ ಪರಿವೀಕ್ಷಕ ಪ್ರಕಾಶ್ ತಾರಿಕೊಪ್ಪ, ಹಾಗು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



















Prathidvani Yellapura