Breaking News

ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ :  ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಮೂಲಕ ಅವರ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ, ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ, ಶಿಸ್ತು, ಸಮಯಪಾಲನೆ ಹಾಗೂ ತಂಡದ ಸ್ಫೂರ್ತಿ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಶನಿವಾರ ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ್, ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಬಾಗ್, ಬಾರತ ಸೇವಾದಳ ಪ್ರಮುಖ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಂಜೀವ್ ಕುಮಾರ್ ಹೊಸಕ್ಕೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಸುಧಾಕರ ನಾಯಕ್, ಅನುದಾನಿತ ಶಿಕ್ಷಕ ಸಂಘದ ಅಧ್ಯಕ್ಷ ಅಜಯ್ ನಾಯಕ್, ದೈಹಿಕ ಶಿಕ್ಷಕ ಪರುವೀಕ್ಷಕ ಪ್ರಕಾಶ್ ತಾರಿಕೊಪ್ಪ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಆರೋಗ್ಯ ಪ್ರಗತಿ ಪರಿಶೀಲನ ಸಭೆ.

ಪ್ರತಿಧ್ವನಿ ಯಲ್ಲಾಪುರ : ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬರೂ ಕಾಯ,ವಾಚ,ಮನಸಾ ಪರಿಶುದ್ದರಾಗಿ ಆತ್ಮ ಒಪ್ಪುವಂತೆ ಸೇವೆ ಸಲ್ಲಿಸ ಬೇಕಿದೆ, …

Leave a Reply

Your email address will not be published. Required fields are marked *