Breaking News

ಯಲ್ಲಾಪುರ ಉದ್ಯಮನಗರ ಗಣಪನ ದರ್ಶಿಸಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಪರಾಮರ್ಶಿಸಿದ ಶಾಸಕ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಯಲ್ಲಾಪುರದ ಉದ್ಯಮ ನಗರದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ದರ್ಶನ ಪಡೆದು ಸ್ಥಳೀಯ  ಸಮಸ್ಯೆಗಳ ಬಗ್ಗೆ ಚರ್ಚಿಸಿ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಶಾಸಕ ಶಿವರಾಮ ಹೆಬ್ಬಾರ್ ಭರವಸೆ ನೀಡಿದ್ದಾರೆ.

ಯಲ್ಲಾಪುರದ ಉದ್ಯಮ ನಗರದಲ್ಲಿ ಕಳೆದ ಮೂರು ದಶಕಗಳಿಂದ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದೆ. ಉದ್ಯಮ ನಗರದ ಯುವಕರೆಲ್ಲರೂ ಸೇರಿ ಒಗ್ಗಟ್ಟಿನಿಂದ ಇಲ್ಲಿ ಗಣೇಶ ಉತ್ಸವ ನಡೆಸುತ್ತಿದ್ದಾರೆ. ಹಿರಿಯರ ಮಾರ್ಗದರ್ಶನದಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಂಘಟಿಸುತ್ತಿದ್ದಾರೆ. ಪ್ರತಿ ವರ್ಷದ ಹಾಗೇ ಈ ವರ್ಷವೂ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಪೂಜೆ, ಮಹಾಪೂಜೆ, ಗಣಹೋಮ, ರಸಮಂಜರಿ ಸೇರಿ ಅನೇಕ ಬಗೆಯ ಕಾರ್ಯಕ್ರಮಗಳು ಇಲ್ಲಿ ನಡೆದಿವೆ. ಅನೇಕ ಭಕ್ತರು ಈ ಕಾರ್ಯಕ್ರಮಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದಾರೆ. ಇಲ್ಲಿ 9 ದಿನಗಳ ಕಾಲ ಉದ್ಯಮನಗರದಲ್ಲಿ ಗಣಪತಿ ಕೂರಿಸಲಾಗುತ್ತದೆ. ಗಣೇಶ ಮೂರ್ತಿ ಕೂರಿಸಲು ತಾತ್ಕಾಲಿಕ ಶೆಡ್ ನಿರ್ಮಿಸಲಾಗಿದ್ದು, ಸುತ್ತಲಿನ ಪ್ರದೇಶದಲ್ಲಿ ಆಕರ್ಷಕ ದೀಪಾಲಂಕಾರವನ್ನು ಮಾಡಲಾಗಿದೆ. ಜೊತೆಗೆ ಗಣೇಶ ಉತ್ಸವ ಸಮಿತಿ ಸದಸ್ಯರೇ ಇಲ್ಲಿ ಗುಹೆ ಆಕಾರದ ಮಂಟಪ ರಚಿಸಿದ್ದಾರೆ. ಆ ಮಂಟಪ ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಪರಿಸರಕ್ಕೆ ಹಾನಿ ಆಗದ ಹಾಗೇ ಮಣ್ಣಿನ ಗಣಪತಿಯ ಮೂರ್ತಿ ರಚಿಸಿ ಪೂಜಿಸಲಾಗುತ್ತಿದೆ. ದೇವಿ ದೇವಸ್ಥಾನ ಬಳಿಯ ಪ್ರಸಾದ ಗುನಗಾ ಅವರು ಗಣೇಶನ ಮೂರ್ತಿ ರಚಿಸಿಕೊಟ್ಟಿದ್ದಾರೆ.

30ನೇ ವರ್ಷದ ಗಣೇಶ ಉತ್ಸವಕ್ಕೆ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಪಟಗಾರ ಅವರು ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಆಮಂತ್ರಿಸಿದ್ದಾರೆ. ಸಮಿತಿಯವರ ಕೋರಿಕೆ ಮೇರೆಗೆ ಶಾಸಕರು ಗಣೇಶ ಉತ್ಸವ ಮಂಟಪಕ್ಕೆ ತೆರಳಿ ದೇವರ ದರ್ಶನ ಮಾಡಿದ್ದಾರೆ. ಈ ವೇಳೆ ಸಮಿತಿಯ ಪ್ರಮುಖರಾದ ಪ್ರವೀಣ್ ರಾಯ್ಕರ್, ಸಾರ್ಥಕ್ ಅಸುಕರ್, ದೇವೇಂದ್ರ ದೇವಾಡಿಗ, ದರ್ಶನ್ ಪಾಟಣಕರ್, ಗಣೇಶ್ ಪಾಟಣಕರ್, ಸಾಗರ್ ದೇಶಭಂಡಾರಿ, ಮದನ್ ಶೆಟ್ಟಿ, ಮೋಹನ್ ದೇವಾಡಿಗ, ಸುದೀಪ್ ಕಬ್ಬರ್ಗಿ, ಅಭಿಷೇಕ ದೇವಾಡಿಗ, ವಿನಯ ಗುನಗಿ, ಸಂದೀಪ ಬಾಂದೇಕರ್, ಪ್ರಶಾಂತ ನಾಯಕ ಇತರರು ಸೇರಿ ಶಾಸಕರನ್ನು ಸನ್ಮಾನಿಸಿದ್ದಾರೆ. ಅದಾದ ನಂತರ ಗಣೇಶ ಉತ್ಸವ ನಡೆಸಲು ಶಾಶ್ವತ ಕಟ್ಟಡ ಅಗತ್ಯವಿರುವ ಬಗ್ಗೆ ವಿವರಿಸಿದ್ದಾರೆ. ಈ ವೇಳೆ ಶಿವರಾಮ ಹೆಬ್ಬಾರ್ ಅವರು ಶಾಶ್ವತ ಕಟ್ಟಡ ನಿರ್ಮಾಣದ ಭರವಸೆ ನೀಡಿದ್ದು, ಒಂದು ವಾರದೊಳಗೆ ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಅದಾದ ನಂತರ ಕ್ಷೇತ್ರದಲ್ಲಿನ ಇನ್ನಿತರ ಸಮಸ್ಯೆಗಳ ಬಗ್ಗೆಯೂ ಶಿವರಾಮ ಹೆಬ್ಬಾರ್ ಅವರು ವಿಚಾರಿಸಿದ್ದಾರೆ. ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುವುದಾಗಿ ಅವರು ಹೇಳಿದ್ದಾರೆ. ಸೆಪ್ಟೆಂಬರ್ 22ರಂದು ಉದ್ಯಮನಗರದ ಗಣೇಶ ಮೂರ್ತಿಯ ವಿಸರ್ಜನೆ ನಡೆಯಲಿದೆ ಎಂದು ಸಮಿತಿಯು ಮಾಹಿತಿ ನೀಡಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *