Breaking News

ಕಸ್ತೂರಿರಂಗನ್ ವರದಿ ಜಿಲ್ಲೆಗೆ ಮರಣ ಶಾಸನ ಜಾರಿಯಾಗಲು ಬಿಡುವ ಮಾತೆ ಇಲ್ಲ.ಸದನದಲ್ಲಿ ಗುಡುಗಿದ ಶಾಸಕ “ಶಿವರಾಮ ಹೆಬ್ಬಾರ್”

ಪ್ರತಿಧ್ವನಿ ಯಲ್ಲಾಪುರ (ಬೆಂಗಳೂರು) : ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಡೆಯುತ್ತಿರುವ ವಿಧಾನಸಭೆಯ ವಿಶೇಷ ಕಲಾಪದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಮಾತನಾಡಿದರು.

ಕಸ್ತೂರಿರಂಗನ್ ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಜನವಸತಿ ಪ್ರದೇಶಗಳ ಮೇಲೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಶಾಸಕರು ಸದನದಲ್ಲಿ ವಿಸ್ತೃತವಾಗಿ ಪ್ರಸ್ತಾಪಿಸಿದರು. ಜಿಲ್ಲೆಯ ಜನರ ಹಿತಾಸಕ್ತಿ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ವಿರೋಧಿಸುವುದಾಗಿ ಅವರು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ, ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯು ಹೊರಡಿಸಿರುವ ಸರ್ಕಾರಿ ಭೂಮಿಯಲ್ಲಿರುವ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ಕುರಿತ ಆದೇಶವನ್ನು ಹಿಂಪಡೆಯಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದರು. ಈ ಆದೇಶದಿಂದ ಗ್ರಾಮೀಣ ಪ್ರದೇಶದ ಜನರಿಗೆ ಉಂಟಾಗಬಹುದಾದ ತೊಂದರೆಗಳನ್ನು ಪರಿಗಣಿಸಿ, ಜನಪರ ನಿರ್ಧಾರ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *