Breaking News

ಉಮ್ಮಚ್ಚಗಿ ಮನಸ್ವಿನಿ ಮೈದಾನದಲ್ಲಿ 200 ಕಂಠದಲ್ಲಿ ಏಕಕಾಲದಲ್ಲಿ ಮೊಳಗಿದ ಸಂಪೂರ್ಣ ” ವಂದೇ ಮಾತರಂ ” ಗೀತೆ.


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಉಮ್ಮಚ್ಚಗಿಯ ಹೆಸರಾಂತ ” ಮನಸ್ವಿನಿ ” ವಿದ್ಯಾಲಯದ ಅಧ್ಯಕ್ಷರಾದ ರೇಖಾ ಭಟ್ ಕೋಟೆಮನೆ ನಿರ್ದೇಶನದಲ್ಲಿ ಮಕ್ಕಳು ಮತ್ತು ಪೊಷಕರು ಹಾಗು ಶಿಕ್ಷಕ,ಶಿಕ್ಷಕೇತರ ಸಿಬ್ಬಂದಿಗಳು ಸೇರಿದಂತೆ ಏಕಕಾಲಕ್ಕೆ 200 ಕ್ಕು ಅಧಿಕ ಕಂಠದಿಂದ ಸುಶ್ರಾವ್ಯವಾಗಿ ಹೊರ ಹೊಮ್ಮಿತು.

ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರ ಭಕ್ತಿಯನ್ನು ಬಡಿದೆಬ್ಬಿಸಿ ಪವಿತ್ರ ಭೂಮಿಯ ಬಗ್ಗೆ ತಾಯ್ತನದ ಭಾವ ಮೂಡಿಸಿ ಎಲ್ಲರೆದೆಯಲ್ಲಿ ರಾಷ್ಟ್ರೀಯತೆ ಕಿಚ್ಚು ಹೊತ್ತಿಸಿದ ” ವಂದೇ ಮಾತರಂ ” ಗೀತೆಯನ್ನು ದೇಶಾದ್ಯಂತ ಏಕ ಕಾಲದಲ್ಲಿ ಹಾಡಿ ಸಂಭ್ರಮಿಸಲಾಯಿತು.

 
“ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ” ನ್ಯೂ ಡೆಲ್ಲಿ ಅವರು ಆಯೋಜಿಸಿದ್ದ ” ವಂದೇ ಮಾತರಂ ” ಗ್ರೂಪ್ ಸಿಂಗಿಗ್ ಕಾರ್ಯಕ್ರಮದಡಿಯಲ್ಲಿ ದೇಶದಾದ್ಯಂತ ಏಕ ಕಾಲದಲ್ಲಿ ಹಾಡಲಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *