Breaking News

ನಮ್ಮ ಮನೆ ನಮ್ಮ ಹಕ್ಕು ಜನಾಗ್ರಹ ಆಂದೋಲನ -ಬಡವರ ಮನೆ ಮತ್ತು ನಿವೇಶನದ ಹಕ್ಕಿಗೆ ಕನ್ನ ಹಾಕುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ

ಪ್ರತಿಧ್ವನಿ ಯಲ್ಲಾಪುರ : ಗ್ರಾಮೀಣ ಭಾಗದ ಬಡವರ ಮನೆ ಹಾಗೂ ನಿವೇಶನದ ಹಕ್ಕನ್ನು ಕಸಿಯುತ್ತಿರುವ ಕರ್ನಾಟಕ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಇಂದು ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಲದ ವತಿಯಿಂದ ಹಾಸಣಗಿ,ಕಂಪ್ಲಿ,ಉಮ್ಮಚ್ಛಗಿ ಮತ್ತು ಕುಂದರ್ಗಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮಂಡಳ‌ ಅಧ್ಯಕ್ಷ ಪ್ರಸಾದ ಹೆಗಡೆ, ರಾಜ್ಯ ವಕ್ತಾರರಾದ ಹರಿಪ್ರಕಾಶ ಕೋಣೆಮನೆ ,ಪ್ರಧಾನ ಕಾರ್ಯದರ್ಶಿ ನಟರಾಜ ಗೌಡಜಿಲ್ಲಾ ಪಧಾಧಿಕಾರಿಗಳಾದ ಉಮ್ಮೇಶ ಭಾಗ್ವತ,ರಾಘವೇಂದ್ರ ಭಟ್ಟ ಮಂಡಳ ಪದಾಧಿಕಾರಿಗಳಾದ ,ವೀನೀಷ ಭಟ್ಟ ಗಣೇಶ ಹೆಗಡೆ,ರಾಘು ಕುಂದರ್ಗಿ,ರಾಮು ಹೆಗಡೆ,ನಾರಯಾಣ ಖಂಡೇಕರ,ಶ್ರೀಪಾದ ಸಂಕದಗುಂಡಿ,ವಾಸು ಭೋವಿ,ಕ್ರಷ್ಣಮೂರ್ತಿಹೆಗಡೆ,ಪವನ ಕೆಸರಕರ,ದಿವಾಕರ ಪೂಜಾರಿ,ಗಣಪತಿ ಹೆಗಡೆ, ಶಂಕರಗದ್ದೆ,ಬಾಸ್ಕರ ಸಿದ್ದಿ,ರಘುಪತಿ‌ಹೆಗಡೆ, ಸೀತಾರಾಮ‌ಗೌಡ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿ, ಸರ್ಕಾರದ ಬಡವರ ವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಿದರು.

!

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *