
ಪ್ರತಿಧ್ವನಿ ಯಲ್ಲಾಪುರ : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಕೆರೆಗಳು ಅಂತರ್ಜಲ ಹೆಚ್ಚಿಸುವ ಜೀವ ನಾಡಿಗಳು ಅವುಗಳನ್ನು ಬದ್ದತೆಯಿಂದ ಕಾಪಾಡಿಕೊಳ್ಳಬೇಕಿದೆ ಈ ದಿಸೆಯಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಂಡ ಸಂಘಟನೆಗಳಿಗೆ ಅಭಿನಂದಿಸುತ್ತೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಜೋಡಕೆರೆ ಆವರಣದಲ್ಲಿ ಕ್ರಿಯೇಟಿವ್ ಕಂಪ್ಯೂಟರ್ ಇನ್ಸ್ಟಿಟ್ಯೂಟ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ, ವಿಷನ್ ಜನಾಭಿವೃದ್ದಿ ಟ್ರಸ್ಟ್, ಪಟ್ಟಣ ಪಂಚಾಯಿತಿ ಯಲ್ಲಾಪುರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.



ಕಾರ್ಯಕ್ರಮದಲ್ಲಿ ಜೋಡಕೆರೆ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.



ಈ ಸಂದರ್ಭದಲ್ಲಿ ವಿಷನ್ ಸಂಸ್ಥೆಯ ಅಧ್ಯಕ್ಷ ವಿಜಯ ಮಿರಾಶಿ, ಕಾರ್ಯದರ್ಶಿ ಸತೀಶ ಶಿವಾನಂದ ನಾಯ್ಕ, ಕ್ರಿಯೇಟಿವ್ ಕಂಪ್ಯೂಟರ್ ಇನ್ಸ್ಟಿಟ್ಯೂಟ್ನ ಮುಖ್ಯಸ್ಥ ಶ್ರೀನಿವಾಸ ಮುರ್ಡೇಶ್ವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ. ಜನಾರ್ದನ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೇಶವ ಚೌಗುಲೆ, ಹಾಗೂ ಆರ್.ಎಫ್.ಒ. ಮಂಜುನಾಥ ಹೆಚ್ ನಾಯ್ಕ್, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು ಸಿಬ್ಬಂದಿಗಳು, ಪೌರಕಾರ್ಮಿಕರು,ಎನ್.ಎಸ್.ಎಸ್ ವಿದ್ಯಾರ್ಥಿಗಳು, ಉಪನ್ಯಾಸಕರು,ಸಾರ್ವಜನಿಕರು ಉಪಸ್ಥಿತರಿದ್ದರು.











Prathidvani Yellapura