
ಪ್ರತಿಧ್ವನಿ ಯಲ್ಲಾಪುರ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ” ಪ್ರಜಾಸೇವಾ ” ಕಾರ್ಯಕ್ರಮ ತಾಲೂಕಿನಾದ್ಯಂತ ವಿವಿಧ ಭಾಗಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು ಅಕ್ಟೋಬರ್ 3 ರ ಶನಿವಾರ ನಂದೊಳ್ಳಿ ಸಭಾಭವನದಲ್ಲಿ ” ಪ್ರಜಾಸೇವಾ ” ಕಾರ್ಯಕ್ರಮ ಜರುಗಲಿದೆ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮ ವಾದ ಪ್ರಜಾ ಸೇವೆ ಆಂದೋಲನವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದಿನಾಂಕ 03/10/2026 ರಂದು ಶನಿವಾರ ಬೆಳಿಗ್ಗೆ 10:00 ಗಂಟೆಯಿಂದ ನಂದೊಳ್ಳಿ ಗ್ರಾಮ ಪಂಚಾಯಿತಿ ಸಭಾಭವನ ದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಸ್ತ ನಾಗರಿಕರು ಈ ಅಭಿಯಾನದ ಪ್ರಯೋಜನವನ್ನು ಪಡೆಯಲು ಕೋರಲಾಗಿದೆ. ಕರ್ನಾಟಕ ಸರ್ಕಾರದ ಯಾವುದೇ ಇಲಾಖೆಯ ಕುಂದು ಕೊರತೆಗಳ ಬಗ್ಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.
ಸಾರ್ವಜನಿಕರ ಕುಂದು ಕೊರತೆಗಳನ್ನು ತ್ವರಿತವಾಗಿ ಸ್ವೀಕರಿಸಿ ವಿಲೇವಾರಿ ಮಾಡಲು ಕ್ರಮವಹಿಸಲಾಗುವುದು.
ಬಾಗಿಲಿಗೆ ಬರಲಿದೆ ಸರಕಾರ ಸೇವೆಗೆ ಇರಲಿ ಸಹಕಾರ.












Prathidvani Yellapura