Breaking News

ಯಲ್ಲಾಪುರದಲ್ಲಿ ರಂಗಸಹ್ಯಾದ್ರಿ ಬೇಸಿಗೆ ಶಿಬಿರಕ್ಕೆ ಚಾಲನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪ್ರತಿವರ್ಷದಂತೆ ಈ ವರ್ಷವೂ ರಂಗಸಹ್ಯಾದ್ರಿ ಅಡಿಯಲ್ಲಿ ಬೇಸಿಗೆ ಶಿಬಿರ ಆರಂಭವಾಗಿದ್ದು ಮೊದಲ ದಿನವೇ 45 ಕ್ಕೂ ಅಧಿಕ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.


ಶಿಬಿರದಲ್ಲಿ ಮಕ್ಕಳು ಎಲ್ಲ ವಿಧದ ತರಬೇತಿಗಳನ್ನು ಪಡೆದು ಪ್ರಯೋಜನ ಪಡೆದುಕೊಳ್ಳಬೇಕಿದೆ. ಬೇಸಿಗೆ ರಜೆ ಎಂದು ಕಾಲಹರಣ ಮಾಡದೇ ಸಂಸ್ಕಾರ, ಸಂಗೀತ, ಕಲೆ, ಸಾಹಿತ್ಯ , ಕ್ರೀಡೆ, ಬುದ್ದಿಚುರುಕಾಗುವಂತಹ ಅಭ್ಯಾಸಗಳನ್ನು ಕಲಿತು ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಳ್ಳಬೇಕು. ಸಮಾಜಕ್ಕೆ ಉತ್ತಮ ಪ್ರಜೆಯಾಗಲು ಮಕ್ಕಳಿರುವಾಗಲೇ ಸಂಸ್ಕಾರವAತ ನಡೆ ಕಲಿತಯಬೇಕೆಂದು ಪಟ್ಟಣದ ಮಾದರಿ ಶಾಲೆಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ಶಿಬಿರ ಉದ್ಘಾಟಿಸಿದ ನಿವೃತ್ತ ಉಪನಿರ್ದೇಶಕ ಕೆ.ಜಿ.ಭಟ್ಟ ಹೇಳಿದರು.


ವೇದಿಕೆಯಲ್ಲಿ ನಿವೃತ್ತ ದೈಹಿಕ ಶಿಕ್ಷಕ ಜಿ.ಎಂ ತಾಂಡುರಾಯನ್, ಕಾ.ನಿ.ಪ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ, ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಗಾಯತ್ರಿ ಬೋಳಗುಡ್ಡೆ, ಸದಸ್ಯೆ ಕವಿತಾ, ನಿವೃತ್ತ ಡಿ.ಆರ್.ಎಫ್.ಒ ಜಿ.ಐ ನಾಯ್ಕ ಉಪಸ್ಥಿತರಿದ್ದರು.


ಕು.ಸಂಪದ ಡಿ ಕಟ್ಟೀಮನಿ ಪ್ರಾರ್ಥಿಸಿದಳು. ಪಾರ್ವತಿ ಡಿ ಕಟ್ಟೀಮನಿ ಸ್ವಾಗತಿಸಿದರು. ಸುಮಂಗಲಾ ಜೋಷಿ ವಂದಿಸಿದರು. ಸುಬ್ರಹ್ಮಣ್ಯ ಭಟ್ಟ ನಿರೂಪಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *