
ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷ ಜಿ.ಟಿ. ನಾಯ್ಕ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ‘ಸಂಘಟನಾ ಸೃಜನ 2.0’ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಮಂಗಳವಾರ ಯಲ್ಲಾಪುರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ. ನಾಯ್ಕ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಜಿ.ಟಿ. ನಾಯ್ಕ ಅವರು ಪಕ್ಷದ ಸಂಘಟನೆ, ಕಾರ್ಯಕರ್ತರ ಪಾತ್ರ ಹಾಗೂ ‘ಸಂಘಟನಾ ಸೃಜನ 2.0’ ಕಾರ್ಯಕ್ರಮದ ಉದ್ದೇಶಗಳ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯವಾಗಿ ಸಂಘಟಿಸುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಮಾತನಾಡಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ನಾಯಕರೆ, ನಿಮ್ಮ ಶ್ರಮ ಮತ್ತು ಪಕ್ಷ ನಿಷ್ಟೆ ಭವುಷ್ಯದ ಚುನಾವಣೆಗಳ ಫಲಿತಾಂಶ ಆಗಿರುತ್ತದೆ ಈ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆ ನಮ್ಮೆಲ್ಲರ ಹೊಣೆಯಾಗಿದೆ ಸಂಘಟಿತರಾಗಿ ಸಂಘಟಿಸೋಣ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಸ್. ಭಟ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾರದಾ ರಾಥೋಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷರಾದ ನರಸಿಂಹ ನಾಯ್ಕ, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರಾದ ಉಲ್ಲಾಸ ಶಾನಭಾಗ, ಹಿರಿಯರಾದ ಪ್ರೇಮಾನಂದ ನಾಯ್ಕ, ಟಿ.ಸಿ. ಗಾಂವ್ಕರ್, ಸೇವಾದಳದ ಜಿಲ್ಲಾಧ್ಯಕ್ಷರಾದ ಪ್ರಶಾಂತ ಸಭಾಹಿತ, ಮಹಿಳಾ ಕಾಂಗ್ರೆಸ್ನ ಸರಸ್ವತಿ ಗುನಗಾ, ಸುಜಾತಾ ಸಿದ್ಧಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಫೈರೋಜ್ ಶೇಖ್, ನಗರ ಘಟಕದ ಅಧ್ಯಕ್ಷರಾದ ಸತೀಶ ನಾಯ್ಕ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.















Prathidvani Yellapura