Breaking News

ವೈ.ಟಿ.ಎಸ್.ಎಸ್ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ


ಯಲ್ಲಾಪುರ : ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನೀಯ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.


ಅರ್ಷ ಶೇಖ ಹರ್ಡಲ್ಸ್ನಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ , ನೀರಜಾ ಸಂತೋಷ ನಾಯಕ ಚಕ್ರ ಎಸೆತದಲ್ಲಿ ಪ್ರಥಮ, ಧನುಷ್ ನಾರಾಯಣ ಹೆಗಡೆ ಚೆಸ್‌ನಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗಂಡು ಮಕ್ಕಳ ರಿಲೇಯಲ್ಲಿ ಪಾರ್ಥ ದೇವಾಡಿಗ, ಅರ್ಷ ಶೇಖ, ಅರ್ಶಲಾನ್ ಶೇಖ, ಮನೀಶ್ ನಾಗರಾಜ ನಾಯ್ಕ, ನೀರಜ್ ಪಟಗಾರ, ಧನುಷ್ ಜೋಗಳೇಕರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರೆ ಹೆಣ್ಣು ಮಕ್ಕಳ ರಿಲೇಯಲ್ಲಿ ಪ್ರಣತಿ ಮಾರುತಿ ಆಚಾರಿ, ಅಮೃತಾ ರಾಮು ಕನ್ಮನೂರು, ಅನನ್ಯಾ ಪ್ರಶಾಂತ ಮರಾಠಿ, ಸಹನಾ ಸೋಮನಾಥ ಶೇಟ, ಕೃತಿಕಾ ಬಂಡಿವಡ್ಡರ, ಅಶ್ವಿನಿ ಮಂಜುನಾಥ ಭಟ್ಟ ದ್ವಿತೀಯ ಸ್ಥಾನ ಪಡೆದು ತಂಡದ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ನಿಧಿ ಸುಬ್ರಾಯ ಪೈ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ, ಪ್ರಥಮ ಅಂಬಿಗ ಯೋಗಾಸನದಲ್ಲಿ ದ್ವಿತೀಯ , ಅನ್ವಿತ್ ನಾಯಕ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ತರಬೇತುದಾರ , ದೈಹಿಕ ಶಿಕ್ಷಕ ಜಿ.ಎಂ ತಾಂಡುರಾಯನ್ ಇವರನ್ನು ಸಂಸ್ಥೆಯ ಅಧ್ಯಕ್ಷರಾದ  ರವಿಕುಮಾರ ಎಲ್ ಶಾನಭಾಗ, ಕಾರ್ಯದರ್ಶಿಗಳಾದ  ರಾಜೇಂದ್ರಪ್ರಸಾದ ಬಿ ಭಟ್ಟ ಹಾಗೂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು, ಮುಖ್ಯಾಧ್ಯಾಪಕಿ ಶೈಲಜಾ ಮಾಪ್ಸೇಕರ, ಪ್ರಾಂಶುಪಾಲರಾದ  ಆನಂದ ಹೆಗಡೆ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳೂ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *