Breaking News

ಸರ್ಕಾರಿ, ಅರಣ್ಯ ಭೂಮಿಯ ಆಸ್ತಿಗಳ ತೆರಿಗೆ ಕೈಬಿಡುವ ಸುತ್ತೋಲೆಗೆ ತಾತ್ಕಾಲಿಕ ತಡೆ – ಶಾಸಕ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ ಪ್ರಯತ್ನದ ಫಲ .

ಪ್ರತಿಧ್ವನಿ ಯಲ್ಲಾಪುರ : ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಆಸ್ತಿಗಳನ್ನು ಕೈಬಿಡುವ ಕುರಿತು ಕಳೆದ ಆಗಸ್ಟ್ 13 ರಂದು ಹೊರಡಿಸಲಾಗಿದ್ದ ಸುತ್ತೋಲೆಗೆ ತಡೆ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳ ತೆರಿಗೆ ಸಂಗ್ರಹಣೆಯನ್ನು ಸ್ಥಗಿತಗೊಳಿಸಿದ್ದರಿಂದ ಸಾರ್ವಜನಿಕರಿಗೆ ಎದುರಾಗುತ್ತಿದ್ದ ಸಮಸ್ಯೆಗಳ ಕುರಿತು ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಭೀಮಣ್ಣ ನಾಯ್ಕ ಅವರು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟು, ಸುತ್ತೋಲೆಯನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು.

ಶಾಸಕರ ಮನವಿಯನ್ನು ಪರಿಗಣಿಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ಕೈಬಿಡುವ ಕುರಿತು ಹೊರಡಿಸಲಾಗಿದ್ದ ಸುತ್ತೋಲೆಗೆ ತಡೆ ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಎದುರಾಗಿದ್ದ ತೆರಿಗೆ ಹಾಗೂ ಇ-ಸ್ವತ್ತು ಸಂಬಂಧಿತ ಸಮಸ್ಯೆಗಳಿಗೆ ಪರಿಹಾರದ ನಿರೀಕ್ಷೆ ಮೂಡಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *