Breaking News

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಮತ್ತೆ ಇಬ್ಬರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಲಕ್ಷ್ಮಣ ಬನ್ಸೋಡೆ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಆನಂದ್ ಗಣಪತಿ ಭಟ್ ನಾಮಪತ್ರ ಸಲ್ಲಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಮೇ.10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್.ಪಾಟೀಲ, ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳ ಘಟಾನುಘಟಿಗಳಿಗಳ ಮದ್ಯೆ ಕಾಂಗ್ರೆಸ್‌ನಿಂದ ಟಿಕೆಟ್ ವಂಚಿತರಾಗಿ ಅಸಮಧಾನಗೊಂಡಿದ್ದ ಪ್ರಬಲ ಆಕಾಂಕ್ಷಿ ಮುಂಡಗೋಡು ತಾಲೂಕಿನ ಕಲಕೇರಿ ಗ್ರಾಮದ ನಿವಾಸಿ ಲಕ್ಷ್ಮಣ ಬನ್ಸೋಡೆ ಸೋಮವಾರ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ ಲಕ್ಷ್ಮಣ ಬನ್ಸೋಡೆ ನಾಮಪತ್ರ ಸಲ್ಲಿಕೆ.

ಮಂಗಳವಾರ ಪಟ್ಟಣದ ಮಂಜುನಾಥನಗರ ನಿವಾಸಿ ಆನಂದ ಗಣಪತಿ ಭಟ್ಟ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿ ಅಜ್ಜಪ್ಪ ಸೊಗಲದ ಅವರ ನಾಮಪತ್ರ ಸ್ವೀಕರಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಗಣಪತಿ ಭಟ್ ನಾಮಪತ್ರ ಸಲ್ಲಿಕೆ


ಲಕ್ಷ್ಮಣ ಬನ್ಸೋಡೆ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಈ ಮೊದಲು ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದರು. ಕೊನೆಗಳಿಗೆಯಲ್ಲಿ ಟಿಕೆಟ್ ವಿ.ಎಸ್ ಪಾಟೀಲ್ ಪಾಲಾಗಿದ್ದು ಪಕ್ಷದ ಆಯ್ಕೆಯ ಕುರಿತು ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು.
ಆನಂದ ಗಣಪತಿ ಭಟ್ಟ ಎಂಬುವರು ಭ್ರಷ್ಟಾಚಾರ ವಿರೋಧಿ ಆಂದೋಲನದ ಭಾಗವಾಗಿ ಕಳೆದೊಂದು ತಿಂಗಳ ಹಿಂದೆ ಗ್ರಾಮದೇವಿ ಜಾತ್ರೆಯ ಸಂದರ್ಭದಲ್ಲಿ ಅಲ್ಲಲ್ಲಿ ಪೋಸ್ಟರ್, ಬ್ಯಾನರ್‌ಗಳನ್ನು ಹಾಕಿ ಚುನಾವಣಾ ಕಣದಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *