Breaking News

ಕ್ಷೇತ್ರದ ಮನೆ ಮನೆಗಳಲ್ಲಿ ಹೆಬ್ಬಾರ್ ಅಭಿಮಾನಿಗಳಿದ್ದು ಅವರು ಮಾಡಿದ ಅಭಿವೃದ್ಧಿ ಕೆಲಸವೆ ಅವರನ್ನು ಗೆಲ್ಲಿಸಲಿದೆ – ಸುಭಾಷ್ ಪಾಲ್ ದೇಸಾಯಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ – ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಅಭಿವೃದ್ಧಿ ಕಾರ್ಯದಲ್ಲಿ ಕೈ ಗೊಳ್ಳಲಾದ ಕ್ರಮಗಳು ಮತ್ತು ಅದಕ್ಕಾಗಿ ವಿವಿಧ ಇಲಾಖೆಗಳ ಮಂತ್ರಿಗಳ ಮನವೊಲಿಸಿ ಕ್ಷೇತ್ರದ ಮೂಲಭೂತ ಸೌಕರ್ಯ ಕಲ್ಪಿಸಲು ತಂದ ಅಪಾರ ಪ್ರಮಾಣದ ಅನುದಾನ ಇವೆಲ್ಲದರ ಜೊತೆಯಲ್ಲಿ ಕೇಂದ್ರದಲ್ಲಿ ಮೋದಿ ನಾಯಕತ್ವ ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿಯವರ ಅಭಿವೃದ್ಧಿ ಪರ ಸರ್ಕಾರದ ಕಾರ್ಯಗಳೆ ಸಚಿವ ಶಿವರಾಮ ಹೆಬ್ಬಾರ್ ಗೆಲುವಿಗೆ ಪೂರಕವಾಗಲಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣ ಪ್ರಭಾರಿ ಗೋವಾ ರಾಜ್ಯದ ಸಮಾಜಕಲ್ಯಾಣ ಸಚಿವ ಸುಬಾಷ್ ಪಾಲ್ ದೇಸಾಯಿ ಹೇಳಿದರು.


ಅವರು ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಹೇಳಿದರು.


ಜನರ ಒಲವು ಸಚಿವ ಹೆಬ್ಬಾರ್ ಅವರ ಕಡೆಗಿದೆ. ಕೇವಲ ಸರ್ಕಾರದ ಅನುದಾನದಲ್ಲಿ ಜನರ ಸೇವೆ ಸಲ್ಲಿಸುವುದು ಮಾತ್ರವಲ್ಲದೆ ತಮ್ಮ ವೈಯಕ್ತಿಕ ಸೇವೆ ಅಡಿಯಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಇದನ್ನು ನಾವೆ ಕ್ಷೇತ್ರದ ಜನರ ಬಾಯಲ್ಲಿ ಕೇಳಿದ್ದೇವೆ. ಇಂತಹ 24 ಗಂಟೆಗಳ ಜನಸೇವೆ ಸಲ್ಲಿಸುವ ಜನನಾಯಕ ಅಪರೂಪದಲ್ಲಿ ಅಪರೂಪವಾಗಿದೆ. ಹೆಬ್ಬಾರ್ ಗೆಲುವು ನಿಶ್ಚಿತ ಎಂದು ಗೋವಾ ರಾಜ್ಯ ವಿಧಾನಸಭೆಯ ಉಪ ಸಭಾಪತಿ ಜೋಶ್ವಾ ಡಿಸೋಜ ಹೇಳಿದರು.


ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ವಕ್ತಾರ ನ್ಯಾಯವಾದಿ ನಾಗರಾಜ್ ನಾಯ್ಕ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಬ್ಬಾರ್ ಗೆಲುವಿನ ಪೂರಕ ಅಂಶಗಳನ್ನು ತೆರೆದಿಟ್ಟರು.
ಸುದಿಗೋಷ್ಟಿಯಲ್ಲಿ ಯಲ್ಲಾಪುರ ತಾಲೂಕು ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಜಿಲ್ಲಾ ಉಪಾಧ್ಯಕ್ಷ ಉಮೇಶ್ ಭಾಗ್ವತ್, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಹೆಗಡೆ ಉಪಸ್ಥಿತರಿದ್ದರು.


ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ನಡೆಯುತ್ತಿರುವ ಮಹದಾಯಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ತಮ್ಮ ನಿಲುವೇನು ಎಂಬ ಕರಾವಳಿ ಮುಂಜಾವು ಪ್ರತಿನಿಧಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೋವಾ ರಾಜ್ಯದ ಸಮಾಜಕಲ್ಯಾಣ ಸಚಿವ ಸುಬಾಷ್ ಪಾಲ್ ದೇಸಾಯಿ ನಮ್ಮ ಹಾಗು ಕರ್ನಾಟಕ ರಾಜ್ಯದ ನಡುವಿನ ನೀರಿನ ಸಮಸ್ಯೆ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ ಮತ್ತು ಕರ್ನಾಟಕ ಸರ್ಕಾರದೊಂದಿಗೆ ಸದಾ ಉತ್ತಮ ಬಾಂದವ್ಯದಲ್ಲಿರಲಿದ್ದೇವೆ ಎಂದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *