Breaking News

ಯಲ್ಲಾಪುರದ ಬೆಲ್ ರಸ್ತೆಯಲ್ಲಿ ದಡೂತಿ ವಾಹನಗಳ ನಿಲುಗಡೆ ಸಂಚಾರಕ್ಕೆ ಅಡಚಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಬೆಲ್ ರಸ್ತೆಯಲ್ಲಿ ಹಳೆಯ ತಹಸೀಲ್ದಾರ್ ಕಚೇರಿಯ ಮುಂಭಾಗ ರಸ್ತೆಯ ಒಂದು ಬದಿ ದಡೂತಿ ಟ್ಯಾಂಕರುಗಳು, ಲಾರಿಯ ಬಾಡಿ ಮಟ್ಟವನ್ನೂ ಮೀರಿ ಕಟ್ಟಿಗೆ ತುಂಬಿರುವ ಲಾರಿ, ಇನ್ನಿತರೆ ದೊಡ್ಡ ಗಾತ್ರದ ವಾಹನಗಳನ್ನು ರಸ್ತೆ ಬದಿ ನಿಲ್ಲಿಸುವುದರಿಂದ ಇನ್ನೊಂದು ಬದಿಯಿಂದ ಬರುವ ವಾಹನಗಳಿಗಾಗಲೀ ಸಂಚರಿಸುವ ಪಾದಚಾರಿಗಳಿಗಾಗಲೀ ಸಂಕಷ್ಟ ತಪ್ಪಿದ್ದಿಲ್ಲ. ಒಂದು ದೊಡ್ಡ ಅವಘಡ ಆಗದ ಹೊರತು ಎಚ್ಚೆತ್ತುಕೊಳ್ಳುವ ಲಕ್ಷಣಗಳೆ ಕಂಡು ಬರುತ್ತಿಲ್ಲ.


ಈ ಸಮಸ್ಯೆಯ ಕುರಿತು ಪತ್ರಿಕೆಗಳೂ ಸಹ ವರದಿ ಪ್ರಕಟಿಸಿ ಎಚ್ಛರಿಸಿದ್ದವು. ಆದರೂ ಯಾವುದೇ ಪ್ರಯೋಜನವಾಗದಿರುವುದು ವಿಪರ್ಯಾಸವಾಗಿದೆ. ಸದ್ಯ ತಹಸೀಲ್ದಾರ ಕಚೇರಿ ನೂತನ ಆಡಳಿತ ಸೌಧಕ್ಕೆ ಸ್ಥಳಾಂತರಗೊAಡಿದ್ದು ಹಳೆಯ ಕಟ್ಟಡದ ಮುಂಭಾಗದ ರಸ್ತೆಯಲ್ಲಿ ವಾಹನ ನಿಲುಗಡೆಗೆ ಕಡಿವಾಣ ಹಾಕುವವರಿಲ್ಲದಂತಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಗಮನ ಹರಿಸಿ ಗಜಗಾತ್ರದ ವಾಹನಗಳನ್ನು ಬೇಕಾಬಿಟ್ಟಿ ರಸ್ತೆ ಬದಿ ನಿಲ್ಲಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಅಬಿಪ್ರಾಯವಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *