Breaking News

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ ಪರ್ವ ಬಲು ಜೋರು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿ ಹಾಗೂ ಚಂದಗುಳಿ ಪಂಚಾಯತ ವ್ಯಾಪ್ತಿಯ 60 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ರಾಘವೇಂದ್ರ ಭಟ್ಟ ನೇತೃತ್ವದಲ್ಲಿ ವಿ.ಎಸ್.ಪಾಟೀಲ ಸಮ್ಮುಖದಲ್ಲಿ ಮುಂಡಗೋಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಬೈಲಂದೂರು ಗ್ರಾಮದ 25 ಕ್ಕೂ ಅಧಿಕ , ಯಲವಳ್ಳಿ ಗ್ರಾಮದ 20 ಕ್ಕೂ ಹೆಚ್ಚು, ಚಂದಗುಳಿ ಪಂಚಾಯತ ವ್ಯಾಪ್ತಿಯ ರಾಮನಕೊಪ್ಪ ವ್ಯಾಪ್ತಿಯ 15 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಕಿರವತ್ತಿ ಗ್ರಾ.ಪಂ ಸದಸ್ಯೆ ನಯನಾ ಬಾಬು ಶೆಂಡಗೆ, ಅವರ ಪತಿ ಬಾಬು ಶೆಂಡಗೆ, ಲಕ್ಕೀಬಾಯಿ ಬಾಗು ಪಟಕಾರೆ , ಪತಿ ಬಾಗು ಪಟಕಾರೆ , ಗ್ರಾ.ಪಂ ಸದಸ್ಯ ಜಾನು ಸೋನು ಪಾಂಡ್ರಮಿಶೆ ಹಾಗೂ ಸುನಿಲ್ ಕಾಂಬ್ಳೆ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ದಿನದಿಂದ ಪಕ್ಷದಿಂದ ಪಕ್ಕಕ್ಕೆ ಹಾರುವ ಪ್ರಕ್ರಿಯೆ ಸರ್ವೇ ಸಾಮಾನ್ಯವಾಗಿದ್ದು ಕಾಂಗ್ರೆಸ್‌ನಿಂದ ಬಿಜೆಪಿಗೆ, ಬಿಜೆಪಿಯಿಂದ ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ಕಾರ್ಯಕರ್ತರ ವಲಸೆ ಪ್ರತಿನಿತ್ಯ ಸಾಗಿದೆ. ವ್ಯಕ್ತಿಯನ್ನು ಅಭಿಮಾನಿಸುತ್ತಿದ್ದವರು ನಮ್ಮ ನಾಯಕ ಹೋಗಿರುವುದರಿಂದ ನಾವೂ ಹೋಗುತ್ತಿದ್ದೇವೆ ಎನ್ನುವವರೂ ಇದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪಿ ಹೋಗುವವರೂ ಇದ್ದಾರೆ. ಒಟ್ಟಿನಲ್ಲಿ ಚುನಾವಣೆಯ ಹೊಸ್ತಿಲಿನಲ್ಲಿ ಈ ಪ್ರಕ್ರಿಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *