Breaking News

ಖಾಸಗಿ ಬಸ್ ಮತ್ತು ಕಾರ್ ನಡುವೆ ಅಪಘಾತ ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು


ಪ್ರತಿಧ್ವನಿ,ಯಲ್ಲಾಪುರ : ಪ್ರವಾಸಕ್ಕೆ ತೆರಳುತ್ತಿದ್ದ ಮಹಾರಾಷ್ಟç ನೋಂದಣಿಯ ಖಾಸಗಿ ಬಸ್ಸು ಮತ್ತು ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಮಾಗೋಡು ತಿರುವಿನ ಸಮೀಪ ನಡೆದಿದೆ.

ಪೂನಾದ ವಿದ್ಯಾರ್ಥಿಗಳು, ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಯಲ್ಲಾಪುರ ಪಟ್ಟಣದ ಹೊರವಲಯದ ಮಾಗೋಡು ತಿರುವಿನ ಸಮೀಪ ಬಳ್ಳಾರಿ-ಕಾರವಾರ ರಾಷ್ಟಿçÃಯ ಹೆದ್ದಾರಿಯಲ್ಲಿ ಕಾಸರಗೋಡಿನಿಂದ ಕೊಲ್ಲಾಪುರಕ್ಕೆ ಮದುವೆ ಕಾರ್ಯಕ್ಕೆಂದು ಕುಟುಂಬವೊAದು ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದು ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಕಾರು ಮತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಬಸ್ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *