Breaking News

ಹೆಬ್ಬಾರ್ ಗೆಲುವಿಗೆ ಮಗಳು ಶೃತಿ ಹೆಬ್ಬಾರ್ ಮತಯಾಚನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು ಮನೆಮನೆ ಪ್ರಚಾರದ ಭರಾಟೆ ಭರದಿಂದ ಸಾಗಿದೆ. ಭಾರತೀಯ ಜನತಾಪಕ್ಷದಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಮ ಹೆಬ್ಬಾರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಪುತ್ರ ವಿವೇಕ್ ಹೆಬ್ಬಾರ್, ಪತ್ನಿ ವನಜಾಕ್ಷಿ ಹೆಬ್ಬಾರ್ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವುದು ತಿಳಿದಿರುವ ವಿಷಯ.


ಐರ್ಲೆಂಡ್‌ನಲ್ಲಿ ವಾಸವಿರುವ ಪುತ್ರಿ ಶೃತಿ ಹೆಬ್ಬಾರ್ ತಂದೆಯಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಪ್ರಚಾರಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿ ಬಾರಿ ಚುನಾವಣಾ ಸಂದರ್ಭದಲ್ಲಿ ವಿದೇಶದಿಂದ ತಂದೆಯ ಪರ ಪ್ರಚಾರಕ್ಕಾಗಿ ಬರುವ ಶೃತಿ ಹೆಬ್ಬಾರ್ ತಮ್ಮದೇ ಮಹಿಳಾ ಬಳಗವನ್ನು ಹೊಂದಿದ್ದು ಎಲ್ಲರೊಂದಿಗೆ ಬೆರೆತು ಸರಳ ಸೌಜನ್ಯದಿಂದ ಪ್ರಚಾರಕಾರ್ಯದಲ್ಲಿ ತೊಡಗಿಕೊಂಡು ವಿದೇಶದಲ್ಲಿ ವಾಸವಿದ್ದರೂ ಭಾರತೀಯ ಸಂಸ್ಕಾರದಿಂದ ಹಿರಿಯರಿಗೆ ಗೌರವ ನೀಡಿ ತಂದೆಯ ಪರ ಮತ ಯಾಚಿಸುತ್ತಾ ಗಮನ ಸೆಳೆದಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *