
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಅಭಿವೃದ್ಧಿಪರ ಕಾರ್ಯಕ್ರಮ ಹಾಗೂ ಬಿಜೆಪಿಯ ತತ್ವ ಸಿದ್ದಾಂತಗಳನ್ನು ಮೆಚ್ಚಿ ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಕಾಂಗ್ರೆಸ್ ತೊರೆದ ಕಾರ್ಯಕರ್ತರಿಗೆ ಸಚಿವರು ಭಾರತೀಯ ಜನತಾ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕ್ಷೇತ್ರದಾದ್ಯಂತ ಇತರೆ ಪಕ್ಷದ ಕಾರ್ಯಕರ್ತರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಕಂಡು ಅತೀವ ಸಂತಸವಾಗುತ್ತಿದೆ. ನಿಮ್ಮೆಲ್ಲರ ಬೆಂಬಲ ಹೀಗೆಯೇ ಇರಲಿ. ಈ ಬಾರಿ ಬಿಜೆಪಿಗೆ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಹೇಳಿದರು.
Prathidvani Yellapura