Breaking News

ಲಾರಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ; ಓರ್ವನ ಸಾವು


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕೋಳಿಕೇರಿ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಲಾರಿ ಮತ್ತು ಬೈಕ್ ನಡುವಿನ ಅಪಘಾತದ ಚಿತ್ರಣ


ಪಟ್ಟಣದ ರವೀಂದ್ರನಗರ ನಿವಾಸಿ ಹನುಮಂತ ತಿಮ್ಮಣ್ಣ ಭೋವಿವಡ್ಡರ್ (18) ಎಂಬಾತನೇ ಮೃತ ಯುವಕನಾಗಿದ್ದು ಶಿಗ್ಗಾವಿ ಮೂಲದ ಫಕೀರೇಶ್ ಹನುಮಂತಪ್ಪ ದೊಡ್ಡಮನಿ ಎಂಬ ಯುವಕನ ಸ್ಥಿತಿ ಗಂಭಿರವಾಗಿದ್ದು ಹುಬ್ಬಳ್ಳಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತ ಯುವಕ ಹನುಮಂತ ತಿಮ್ಮಣ್ಣ ಬೋವಿ ವಡ್ಡರ್
ಗಂಭೀರವಾಗಿ ಗಾಯಗೊಂಡ ಯುವಕ ಪಕೀರೇಶ್ ಹನುಮಂತಪ್ಪ ದೊಡ್ಮನಿ


ಹುಬ್ಬಳೀ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಕಬ್ಬಿಣದ ಸಾಮಗ್ರಿ ತುಂಬಿದ್ದ ಲಾರಿಗೂ ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *