Breaking News

ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು, ರಾಜ್ಯದಲ್ಲಿ ಕಾಂಗ್ರೆಸ್ ಸೋಲೋ….!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ – ರಾಜ್ಯ ವಿಧಾನಸಭಾ ಚುನಾವಣ ಪಲಿತಾಂಶ ಹೊರಬಿದ್ದಿದೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಸೋಲು ಕಂಡಿದ್ದಾರೆ ಆದರು ಯಲ್ಲಾಪುರ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಕ್ಕೆ ಕೊರತೆ ಇರಲಿಲ್ಲ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಲ್ಪ ಮತಗಳಿಂದ ವಿ.ಎಸ್.ಪಾಟೀಲ್ ಸೋತರು ಅದೊಂದು ಸೋಲಲ್ಲ ಗೆಲುವಿಗೆ ಸಮ ಹಾಗು ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿ ಬಡವರ ಜೀವನಕ್ಕೆ ಕಷ್ಟ ತಂದೊಡ್ಡಿದ್ದ ಬಿಜೆಪಿ ದುರಾಡಳಿತವನ್ನು ರಾಜ್ಯದ ಜನತೆ ಬೇರು ಸಹಿತ ಕಿತ್ತೊಗೆದು ಬಡವರ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ತಂದ ಸಂಭ್ರಮಕ್ಕೆ ನಮ್ಮ ಸಂತಸ ಎನ್ನುತ್ತಾರೆ ಕಾಂಗ್ರೆಸ್ಸಿಗರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *