Breaking News

ಯಲ್ಲಾಪುರದ ಆರ್ತಿಬೈಲ್ ಘಟ್ಟದಲ್ಲಿ ಮದ್ಯದ ಬಾಕ್ಸ್ ತುಂಬಿದ್ದ ಲಾರಿ ಪಲ್ಟಿ


ಪ್ರತಿಧ್ವನಿ,ಯಲ್ಲಾಪುರ- ತಾಲ್ಲೂಕಿನ ಆರ್ತಿಬೈಲ್ ಘಟ್ಟದಲ್ಲಿ ಮದ್ಯದ ಬಾಕ್ಸ್ ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗಟಾರಕ್ಕೆ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.


ಕಲ್ಬುರ್ಗಿಯಿಂದ ಉಡುಪಿಗೆ ವಿವಿಧ ಮಾದರಿಯ ಮದ್ಯದ ಬಾಟಲ್ ಇರುವ ಬಾಕ್ಸ್ ಗಳನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಯು ತಾಲ್ಲೂಕಿನ ಅರ್ತಿಬೈಲ್ ಘಟ್ಟ ಪ್ರದೇಶದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಲಾರಿಯ ಮುಂಬಾಗ ಜಕಂ ಆಗಿದ್ದು ಲಾರಿಯಲಿದ್ದ ಚಾಲಕ ಮತ್ತು ಸಹಾಯಕನಿಗೆ ಪೆಟ್ಟಾಗಿದೆ. ಮಾಹಿತಿ ಲಭಿಸುತ್ತಲೆ ತಕ್ಷಣ 108 ಆಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಯಲ್ಲಾಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *