Breaking News

ಕೊಟ್ಟ ಭರವಸೆ ಈಡೇರಿಸಿ-ರಾಮು ನಾಯ್ಕ್.

ಪ್ರತಿಧ್ವನಿ,ಯಲ್ಲಾಪುರ : ಕಾರಣಗಳೇನೇ ಇರಲಿ ಇಂದಿನಿಂದ ಅಧಿಕಾರಕ್ಕೆ ಬರಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಹಾಗೂ ಜನಪರ ಆಡಳಿತ ನೀಡಲಿ ಎಂದು ನಾಗರೀಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಕಾರ್ಡುಗಳು ಹಾಗೂ ಅನೇಕ ಉಚಿತ ಕೊಡುಗೆಗಳು ಮತದಾರರ ಮೇಲೆ ಸಾಕಷ್ಟು ಪರಿಣಾಮ ಬೀರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.

135 ಸ್ಥಾನಗಳಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿದ ಮತದಾರ ಪ್ರಭು ತನ್ನ ಕೆಲಸ ಮಾಡಿದ್ದಾನೆ. ಇನ್ನೇನಿದ್ದರೂ ನೀಡಿದ ಭರವಸೆಗಳನ್ನು ಪೂರೈಸುವುದು ಸರ್ಕಾರದ ಕೆಲಸವಾಗಿದೆ.
ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ಮೊಟ್ಟ ಮೊದಲ ಸಂಪುಟ ಸಭೆಯಲ್ಲೇ ಈ ಘೋಷಣೆಗಳನ್ನು ಕಾರ್ಯರೂಪಕ್ಕೆ ತರುವುದಾಗಿ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು.

ಮುಂದಿನ 5 ವರ್ಷಗಳ ಕಾಲ ನಿರಂತರವಾಗಿ ಸಿಗಲಿರುವ ಉಚಿತ ಸರ್ಕಾರಿ ಸವಲತ್ತುಗಳಿಗಾಗಿ ಕರ್ನಾಟಕದ ಜನತೆ ತುದಿಗಾಲಿನಲ್ಲಿ ಕಾಯುತ್ತಿದ್ದು ಆದಷ್ಟು ಶೀಘ್ರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *