Breaking News

ರಾಜ್ಯದ 24 ನೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಯಲ್ಲಾಪುರ ಕಾಂಗ್ರೆಸ್ ಪಾಳಯದಲ್ಲಿ ಹರ್ಷೋದ್ಗಾರ.

ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸದ್ದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪರ ಜಯಘೋಷ ಮುಗಿಲು ಮುಟ್ಟಿತ್ತು.


ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ್ ಮಾತನಾಡಿ ರಾಜ್ಯಕ್ಕಿಂದು ಹಬ್ಬದ ವಾತಾವರಣ ಬಡವರ,ಶೋಷಿತರ, ಅಲ್ಪಸಂಖ್ಯಾತರ, ದಲಿತ, ಹಿಂದುಳಿದ,ಮಧ್ಯಮ ವರ್ಗದ ಜನ ನಾಯಕರಾಗಿ ಗುರುತಿಸುವ ಸಿದ್ದರಾಮಯ್ಯ ಅವರು ರಾಜ್ಯದ ಚುಕ್ಕಾಣಿ ಹಿಡಿದದ್ದು ಕರ್ನಾಟಕದ ಭಾಗ್ಯವಾಗಿದೆ.

ಯುವಕರ ಕಣ್ಮಣಿ ಪಕ್ಷವನ್ನು ಸಂಕಷ್ಟದಲ್ಲು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಜನಪರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವುದು ಸಂತಸವಾಗಿದೆ. ಗ್ಯಾರಂಟಿ ಕಾಡ್೯ ಮೂಲಕ ಜನರ ಮನಗೆದ್ದು ಜಯಭೇರಿ ಬಾರಿಸಲಾಗಿದೆ. ಕ್ಷೇತ್ರದಲ್ಲಿ ವಿ.ಎಸ್.ಪಾಟೀಲ್ ಸಹ ಅತ್ಯಂತ ಕಡಿಮೆ ಅಂತರದಲ್ಲಿ ಸೋತಿರುವುದು ಗೆಲುವಿಗೆ ಸಮವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಮತ್ತು ಅನುಭವಿ ಮುತ್ಸದ್ದಿ ಉತ್ತರ ಕನ್ನಡ ಜಿಲ್ಲೆಯ ಹೆಮ್ಮಯ ನಾಯಕ ಆರ್‌.ವಿ.ದೇಶಪಾಂಡೆ ಅವರಿಗೆ ಕ್ಷೇತ್ರದ ಉಸ್ತುವಾರಿ ಸಚಿವ ಸ್ಥಾನ ಮತ್ತು ಉತ್ತಮ ಖಾತೆಯ ಸಚಿವ ಸ್ಥಾನ ನೀಡಿ ಗೌರವ ತೋರಬೇಕಿದೆ ಎಂದರು.

ನಂತರ ಅಧ್ಯಕ್ಷ ಡಿ.ಎನ್.ಗಾಂವ್ಕರ್ ಹಾಗು ಎಂ.ಜಿ.ಭಟ್ ಅವರಿಗೆ ಹೂವಿನ ಹಾರಹಾಕಿ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ಮೂಲಕ ಜಯಘೋಷ ಕೂಗುತ್ತ ಕರೆತಂದು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸದಸ್ಯರಾದ ನರ್ಮದಾ ನಾಯ್ಕ್, ಸೈಯದ್ ಕೈಸರ್ ಪ್ರಮುಖರಾದ ವಿ.ಎಸ್.ಭಟ್ , ಉಲ್ಲಾಸ ಶಾನಬಾಗ್, ರಾಘು ಭಟ್ , ಪ್ರಶಾಂತ್ ಸಭಾಹಿತ್, ಅನಿಲ್ ನಾಯ್ಕ್ ಇಡಗುಂದಿ, ಸಂತೋಷ್ ನಾಯ್ಕ್, ದಿಲೀಪ್ ರೋಖಡೆ, ಸರಸ್ವತಿ ಗುನಗಾ, ಪೂಜಾ ನೇತ್ರೇಕರ್ ಮುಷರತ್, ಆಯಿಷಾ ಇನ್ನೂ ಮುಂತಾದವರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು..

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಎಂ.ಎಲ್.ಸಿ ಶಾಂತಾರಾಮ್ ಸಿದ್ದಿ ಅವರಿಗೆ ಒಲಿದ  ಬಿಜೆಪಿಯ ರಾಷ್ಟ್ರೀಯ ಸ್ಥಾನ.

ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನತಾ ಪಾರ್ಟಿಯ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾಗಿ ವಿಧಾನ …

Leave a Reply

Your email address will not be published. Required fields are marked *