Breaking News

ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ದ್ವಿದಶಮಾನೋತ್ಸವ ಸಂಭ್ರಮ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚಗಿಯಲ್ಲಿ ಕಾರ್ಯಾಲಯವನ್ನು ಹೊಂದಿ ಯಲ್ಲಾಪುರ, ಶಿರಸಿ, ಮುಂಡಗೋಡು ಹಾಗೂ ಹಿರೇಸರ (ಪತ್ತೇತರ) ಶಾಖೆಗಳನ್ನು ಹೊಂದಿರುವ ಶ್ರೀಮಾತಾ ವಿವಿಧ್ಧೋದ್ದೇಶಗಳ ಸೌಹಾರ್ದ ಸಹಕಾರಿ (ಹಿರೇಸರ) ಯು ದ್ವಿದಶಮಾನೋತ್ಸವ ವರ್ಷಾಚರಣೆಯ ಸಂಭ್ರಮದ ಹೊಸ್ತಿಲಲ್ಲಿದೆ ಎಂದು ಸಹಕಾರಿಯ ಅಧ್ಯಕ್ಷ ಜಿ.ಎನ್.ಹೆಗಡೆ ಹಿರೇಸರ ಹೇಳಿದರು.
ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರೆದಿದ್ದ ಸುದ್ಧಿಗೋಷ್ಟಿಯಲ್ಲಿ ದ್ವಿದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಮಾಧ್ಯಮದವರಿಗೆ ಮಾಹಿತಿ ನೀಡುತ್ತಿದ್ದರು.
ಸುಮಾರು 20 ವರ್ಷಗಳ ಹಿಂದೆ (2004) ಅತ್ಯಂತ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಗ್ರಾಹಕರ ಅನುಕೂಲಕ್ಕೆಂದು ಸ್ಥಾಪನೆಯಾದ ತಮ್ಮ ಸಹಕಾರಿಯು ಗ್ರಾಹಕರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಗಳಿಂದಲೇ ಇಂದು ನಿರೀಕ್ಷೆಗೂ ಮೀರಿ ಬೆಳವಣಿಗೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಈ ವರ್ಷವನ್ನು ಪೂರ್ತಿ ದ್ವಿದಶಮಾನೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಮೊದಲ ಹಂತದ ಕಾರ್ಯಕ್ರಮವನ್ನು ಜೂನ್.1 ರಂದು ಸೋಂದಾ ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ. ಅಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಶಿವರಾಮ ಹೆಬ್ಬಾರ ವಹಿಸುವರು.


ಸಹಕಾರಿಯ ಹಿರಿಯ ಸಂಸ್ಥಾಪಕ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ನೆರವೇರಿಸಲಾಗುತ್ತಿದ್ದು, ರಾಜ್ಯ ಸೌಹಾರ್ದ ಸಹಕಾರಿಯ ಅಧ್ಯಕ್ಷ ನಂಜನಗೌಡ ಸನ್ಮಾನ ನೆರವೆರಿಸುವರು. ಅತಿಥಿಗಳಾಗಿ ಸಹಕಾರಿ ಕ್ಷೇತ್ರದ ವಿವಿಧ ಪ್ರಮುಖರು ಪಾಲ್ಗೊಳ್ಳುವರು ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 4-30 ಕ್ಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ ಎಂದು ವಿವರಿಸಿದರು.
ಈ ಜೊತೆಗೆ ಜಿಲ್ಲಾಮಟ್ಟದ ಭವದ್ಗೀತಾ ಸ್ಪರ್ಧೆ, ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಭಕ್ತಿಗೀತಾ ಸ್ಪರ್ಧೆ ಆಯೋಜಿಸಲಾಗಿದೆ ಎಂದು ವಿವರಿಸಿದರು.
ದ್ವಿದಶಮಾನೋತ್ಸವ ಅಂಗವಾಗಿ ನಡೆಸಲಾಗುವ ಮುಂದಿನ ಹಂತದ ಕಾರ್ಯಕ್ರಮಗಳಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ, ಕ್ರಿಡಾ ಕಾರ್ಯಕ್ರಮಗಳನ್ನು ನಡೆಸಲಾಗುವುದಲ್ಲದೇ ಇದೇ ಸಂದರ್ಭದಲ್ಲಿ ಉಪಯುಕ್ತ ಬರಹಗಳನ್ನು ಒಳಗೊಂಡ ಅಧ್ಯಯನಪೂರ್ಣ ಲೇಖನಗಳ `ದ್ವಿದಶಮಾನ ಯಾನ’ ಎಂಬ ಸ್ಮರಣಸಂಚಿಕೆಯನ್ನು ಹೊರತರಲಾಗುವುದು. ಅಲ್ಲದೇ ಇದೇ ಶುಭಸಂದರ್ಭದಲ್ಲಿ ಸಂಘದ ನೂತನ ವ್ಯಾಪಾರ ಮಳಿಗೆಯೊಂದನ್ನು ಲೋಕಾರ್ಪಣೆ ಮಾಡಲಾಗುವುದಲ್ಲದೇ ಉತ್ತಮ ಗ್ರಾಹಕರು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಅಲ್ಲದೇ ಕ್ಯಾನ್ಸರ್ ಪೀಡಿತರಿಗೆ ನೆರವು, ಆರೋಗ್ಯ ಶಿಬಿರ, ಅಂಗವಿಕಲರಿಗೆ ನೆರವು ಇತ್ಯಾದಿ ಕಾರ್ಯಕ್ರಮಗಳನ್ನು ಜರುಗಿಸಲಾಗುವುದೆಂದು ಜಿ.ಎನ್.ಹೆಗಡೆ ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಎಸ್.ಎಸ್.ಭಟ್ಟ ಈರಾಪೂರ, ನಿರ್ದೇಶಕರಾದ ಆರ್.ಡಿ.ಹೆಬ್ಬಾರ, ರವೀಂದ್ರ ಹೆಗಡೆ, ಆರ್.ಎಲ್.ಭಟ್ಟ, ವನರಾಗ ಶರ್ಮಾ, ಜಿ.ಕೆ.ಹೆಗಡೆ, ಕೆ.ಎಸ್.ಭಟ್ಟ, ಮುಖ್ಯವ್ಯವಸ್ಥಾಪಕ ಜಿ.ಎಸ್.ಹೆಗಡೆ ಹಿತ್ಲಳ್ಳಿ, ಶಾಖಾ ವ್ಯವಸ್ಥಾಪಕ ವಿನೋದ ನಾಯ್ಕ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *