Breaking News

ಗಾಳಿ ಮಳೆಗೆ ಕೋಟೆಮನೆಯಲ್ಲಿ ಹಾನಿ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಕೋಟೆಮನೆಯಲ್ಲಿ ಮಂಗಳವಾರ ರಾತ್ರಿ ಬೀಸಿದ ಬಿರುಗಾಳಿ,ಮಳೆಯ ರಭಸಕ್ಕೆ ಆರೇಳು ಮನೆಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾದ ಘಟನೆ ಸಂಭವಿಸಿರುತ್ತದೆ.
ಗೌರಿ ರಾಮಾ ಸಿದ್ದಿ, ರುಕ್ಮಿಣಿ ಕೃಷ್ಣಾ ಸಿದ್ದಿ,ದೇವಕಿ ನಾರಾಯಣ ಪಟಗಾರ, ನಾರಾಯಣ ಮಡೂರ ಪೂಜಾರಿ, ಕೃಷ್ಣ ನಾಗಾ ಸಿದ್ದಿ ಮೊದಲಾದವರ ಮನೆಗಳ ಹೆಂಚು ಮತ್ತು ತಗಡಿನ ಶೀಟುಗಳು ಬಿರುಗಾಳಿಗೆ ಹಾರಿ ಹೋಗಿರುತ್ತವೆ.

ಕೋಟೆಮನೆ ಅಂಗನವಾಡಿ ಕೇಂದ್ರಕ್ಕೂ ಬಿರುಗಾಳಿಯಿಂದ ಹಾನಿಯಾಗಿರುತ್ತದೆ. ರಾತ್ರಿ ಘಟನೆ ನಡೆದ ತಕ್ಷಣ ಉಮ್ಮಚ್ಗಿ ಗ್ರಾ.ಪಂ. ಸ್ಥಳೀಯ ಸದಸ್ಯ ಗ.ರಾ.ಭಟ್ಟ, ಗ್ರಾ.ಪಂ.ಡಾಟಾ ಎಂಟ್ರಿ ನೌಕರ ಗಣಪತಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ಶಾಸಕ ಶಿವರಾಮ ಹೆಬ್ಬಾರ್ ಮಾರ್ಗದರ್ಶನದಂತೆ ಬೆಳಿಗ್ಗೆ ಉಪ ತಹಶಿಲ್ದಾರ ಕೆ.ಎಸ್. ಫರ್ನಾಂಡೀಸ್, ವಿಲೇಜ್ ಅಕೌಂಟೆAಟ್ ಸವಿತಾ ಭಜಂತ್ರಿ, ಉಮ್ಮಚ್ಗಿ ಗ್ರಾ.ಪಂ. ಕಾರ್ಯದರ್ಶಿ ಶಂಕರ ನಾಯ್ಕ, ಅಧ್ಯಕ್ಷೆ ರೂಪಾ ಪೂಜಾರಿ, ಸದಸ್ಯ ಖೈತಾನ್ ಡಿಸೋಜ, ಉಗ್ರಾಣಿ ವೆಂಕಟೇಶ, ಊರಿನ ಹಿರಿಯರಾದ ರಾಮಚಂದ್ರ ಸಿದ್ದಿ ಕೋಟೆಮನೆ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *