Breaking News

ಡೋಮಗೇರಿಯಲ್ಲೊಂದು ಕಳ್ಳತನ ; 1,40,000 ಮೌಲ್ಯದ ನಗ-ನಾಣ್ಯ ಕದ್ದೊಯ್ದ ಕಳ್ಳರು


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಡೋಮಗೇರಿ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬಂಗಾರದ ಒಡವೆ, ನಗದು ಸೇರಿದಂತೆ 1 ಲಕ್ಷದ 40 ಸಾವಿರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ.


ಕೃಷಿ ಕಾಯಕ ಮಾಡುವ ಡೋಮಗೇರಿ ನಿವಾಸಿ ಪ್ರದೀಪ ದಿವಾಕರ ಹೆಗಡೆ ಎಂಬುವರ ವಾಸದ ಮನೆಯಲ್ಲಿ ಮೇ 24 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹೆಂಚನ್ನು ತೆಗೆದು ಒಳನುಸುಳಿ ಕಪಾಟಿನ ಬಾಗಿಲು ಮುರಿದು 15 ಗ್ರಾಂ ಬಂಗಾರದ ಚೈನ್, 20 ಗ್ರಾಂ ಎರಡು ಬಂಗಾರದ ಬಳೆ, 5 ಗ್ರಾಂನ ಒಂದು ಉಂಗುರ ಹಾಗೂ 8000 ರೂ ನಗದು ಸೇರಿದಂತೆ 1 ಲಕ್ಷದ 40 ಸಾವಿರ ಮೌಲ್ಯದ ಸ್ವತ್ತನ್ನು ಅಪಹರಿಸಿ ಪರಾರಿಯಾಗಿದ್ದಾರೆ ಎಂದು ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿವಿದ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *