Breaking News

ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಯಲ್ಲಾಪುರ

ಪ್ರತಿಧ್ವನಿ, ಯಲ್ಲಾಪುರ – ತಂಬಾಕು ದುಶ್ಚಟದಿಂದ ಯುವ ಜನಾಂಗ ದೂರವಿರಬೇಕಾಗಿದೆ. ವೈಜ್ಞಾನಿಕ ಅಧ್ಯಯನದ ಪ್ರಕಾರ ಕ್ಯಾನ್ಸರ್ ರೋಗ ಹೆಚ್ಚಲು ತಂಬಾಕು ಉತ್ಪನ್ನ ಪ್ರಮುಖ ಕಾರಣವಾಗಿದೆ. ತಂಬಾಕು ಸೇವನೆಯಿಂದ ದೇಹದ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಸದೃಡತೆ ಕುಗ್ಗಲಿದೆ ದುಶ್ಚಟಗಳಿಂದ ದೂರ ಇರೋಣ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ” ವಿಶ್ವ ತಂಬಾಕು ರಹಿತ ದಿನಾಚರಣೆ ” ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು.

ತಾಲೂಕು ಸರ್ಕಾರಿ ಆಸ್ಪತ್ರೆ ತಜ್ಞ ವೈದ್ಯೆ ಡಾ, ಸೌಮ್ಯ ತಂಬಾಕು ಸೇವನೆಯ ದುಷ್ಪರಿಣಾಮ, ಕೋಕಾ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ತಹಶಿಲ್ದಾರ ಗುರುರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ,ನರೇಂದ್ರ ಪವಾರ್, ಕಾಲೇಜು ಪ್ರಾಂಶುಪಾಲ ಡಿ.ಎಸ್.ಭಟ್ ಮಾತನಾಡಿದರು.ಯಲ್ಲಾಪುರ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೆ ಬಾರಿ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಅವರಿಗೆ ಕಾಲೇಜು ವತಿಯಿಂದ ಅಭಿನಂದಿಸಿ ಗೌರವಿಸಿದರು.

ನಮೃತಾ ಹೆಬ್ಬಾರ್ ಪ್ರಾರ್ಥಿಸಿದರು, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ ಸ್ವಾಗತಿಸಿದರು, ಎನ್.ಎಸ್.ಎಸ್ ಅಧಿಕಾರಿ ರಾಮಕೃಷ್ಣ ಗೌಡ ನಿರೂಪಿಸಿದರು. ಉಪನ್ಯಾಸಕಿ ಸವಿತಾ ನಾಯ್ಕ್ ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಭಾವಗಳ ಬ್ರಹ್ಮಾಂಡ” ಕವನ ಸಂಕಲನ ಮೇ 1 ಕ್ಕೆ ಅನಾವರಣ..

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಇದೇ ಮೊದಲು AI ತಂತ್ರಜ್ಞಾನ ಬಳಸಿ ಒಂದು ಸುಂದರ ಕವನ ಸಂಕಲನ ರೂಪುಗೊಂಡಿದ್ದು “ಭಾವಗಳ …

Leave a Reply

Your email address will not be published. Required fields are marked *