Breaking News

ಸುದ್ದಿಯಾಗುತ್ತಲೆ ಸಿದ್ದ ಗೊಂಡ ಸರ್ಕಾರಿ ಫಲಕ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಯಲ್ಲಾಪುರ : ಬಹು ಸಮಯದಿಂದ ಪಟ್ಟಣದ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಉಪಖಜಾನೆ ಇಲಾಖೆಯ ಮುಂಭಾಗದಲ್ಲೇ ಅವರದ್ದೇ ಕಚೇರಿಗೆ ಸಂಬಧಿಸಿದ ಫಲಕ ಬಿದ್ದು ಹೋಗಿರುವ ಕುರಿತು ಜಿಲ್ಲೆಯ ಪ್ರಮುಖ ಪತ್ರಿಕೆಯಲ್ಲಿ ಮತ್ತು ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನಲ್ಲಿ ಪ್ರಕಟವಾಗಿತ್ತು ಇದನ್ನು ಕಂಡು ಎಚ್ಚೆತ್ತ ಸಂಬಂಧಿಸಿದ ಇಲಾಖೆ ಹಾಳಾಗಿ ಬಿದ್ದಿದ್ದ ಕಚೇರಿ ಫಲಕವನ್ನು ಬದಲಿಸಿ ಹೊಸತನ್ನು ಅಳವಡಿಸಿದ್ದು ಸುದ್ದಿಗೆ ಸಿಕ್ಕ ಸ್ಪಂದನೆಯಾಗಿದೆ. ಸಾರ್ವಜನಿಕರು ಈ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ.

ಯಾವುದೆ ಇಲಾಖೆಗಳು ತಮ್ಮ ಇಲಾಖೆಯ ಗೌರವವನ್ನು ಕಾಪಾಡುವ ವಿಚಾರದಲ್ಲಿ ವಿಳಂಬ ತೋರಬಾರದು. ತಕ್ಷಣ ಸಮಸ್ಯೆ ಇದ್ದಲ್ಲಿ ಸರಿಪಡಿಸಿಕೊಳ್ಳಬೇಕಿದೆ. ಉಪ ಖಜಾನೆ ಕಚೇರಿಯ ಫಲಕ ಸರಿಪಡಿಸಿದಕ್ಕಾಗಿ ” ಪ್ರತಿಧ್ವನಿ” ಯಲ್ಲಾಪುರ ಕೃತಜ್ಞತೆ ಸಲ್ಲಿಸುತ್ತದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *