Breaking News

ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ವೈ.ಟಿ.ಎಸ್.ಎಸ್‌ಗೆ ನೂತನ ಸಾರಥಿಯಾಗಿ ಆನಂದ್ ಹೆಗಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ, ಯಲ್ಲಾಪುರ : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಯಲ್ಲಾಪುರದ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ನೂತನ ಪ್ರಾಂಶುಪಾಲರಾಗಿ ಆನಂದ ಹೆಗಡೆ ಅಧಿಕಾರ ವಹಿಸಿಕೊಂಡಿದ್ದಾರೆ.


ತಾಲೂಕಿನ ಹಿತ್ಲಳ್ಳಿ ಮೂಲದ ಆನಂದ ಹೆಗಡೆ ಕಳೆದ ೯ ವರ್ಷಗಳಿಂದ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಕಾಲೇಜು ವಿಭಾಗದ ಗಣಿತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ತೆರವುಗೊಂಡ ಪ್ರಾಂಶುಪಾಲರ ಹುದ್ದೆಗೆ ಆಡಳಿತ ಮಂಡಳಿಯ ನಿರ್ದೇಶನದಂತೆ ನೇಮಕಗೊಂಡಿರುತ್ತಾರೆ.


ಬರಲಿರುವ ದಿನಗಳಲ್ಲಿ ಶಿಕ್ಷಣ ಸಂಸ್ಥೆಯ ಉತ್ತಮ ಹೆಸರನ್ನು ಮತ್ತಷ್ಟು ಉಜ್ವಲಗೊಳಿಸಿ ವಿದ್ಯಾಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಲಿ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು , ಉಪನ್ಯಾಸಕರು, ಶಿಕ್ಷಕರು ಹಾಗೂ ಶಿಕ್ಷಕೆತರ ವರ್ಗದವರು ಶುಭ ಹಾರೈಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *